ಸುದ್ದಿಮೂಲ ವಾರ್ತೆ,
ಮೈಸೂರು, ಏ. 27: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ದಡ್ಡ, ವರುಣದಲ್ಲಿ ಲಕ್ಷ ಮತಗಳ ಅಂತರಿದಂದ ಗೆಲ್ಲಲು ಸಾಧ್ಯ ಎಂದು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯ ಉದ್ದಕ್ಕೂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಪ್ರಸಾದ್ ಅವರು, ವರುಣದಲ್ಲಿ 1 ಲಕ್ಷ ಮತಗಳ ಅಂತರದಿಂದ ಗೆಲ್ಲುವುದಾಗಿ ಹೇಳುವ ಸಿದ್ದರಾಮಯ್ಯ ಮಾತನಾಡುವ ಮೊದಲು ಯೋಚನೆ ಮಾತನಾಡಬೇಕು. 2018ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗಲೂ ಇದೇ ಮಾತನಾಡುತ್ತಿದ್ದರು. 26 ಸಾವಿರ ಮತಗಳಿಂದ ಸೋತಿದ್ದನ್ನು ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಪಾರ್ಟಿ ಒಂದು ಮದ್ದೂರು ಸೆಟಲ್ ಟ್ರೈನ್ ಆಗಿದೆ. ಮದ್ದೂರು ಸೆಟಲ್ ಟ್ರೈನ್ ಎಂದರೇ ಗೊತ್ತಾ? ಅದು ಮದ್ದೂರು ಬಿಟ್ಟು ಯಾವಾಗ ಬೆಂಗಳೂರು ಸೇರುತ್ತೆ ಎನ್ನುವುದೇ ಗೊತ್ತಾಗಲ್ಲ ಅದೇ ಪರಿಸ್ಥಿಯಲ್ಲಿ ಇಂದು ಕಾಂಗ್ರೆಸ್ ಪಕ್ಷವಿದೆ ಆದರೂ ಅಧಿಕಾರದ ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ಡಿಕೆಶಿ ರಕ್ತದಲ್ಲಿ ಬರೆದು ಕೊಡುತ್ತೇನೆ ಎನ್ನುತ್ತಾರೆ. ಒಂದು ರಾಷ್ಟ್ರೀಯ ಪಕ್ಷದ ರಾಜ್ಯದ ಅದ್ಯಕ್ಷರಾಗಿ ಮಾತನಾಡುವ ರೀತಿ ಇದೇನಾ ಎಂದು ಪ್ರಶ್ನಿಸಿದ ಅವರು. ಡಿಕೆಶಿ ಮೇಲೆ ಇಡಿ ಕತ್ತಿ ತೂಗಡುತ್ತಿದೆ ಯಾವಾಗ ಎಲ್ಲಿ ಏನಾಗುತ್ತೋ ಗೊತ್ತಿಲ್ಲ ಆರೂವರೆ ಸಾವಿರ ಕೋಟಿ ಒಡೆಯ ಮುಖ್ಯಮಂತ್ರಿ ಆಗಿ ಏನು ಆಡಳಿತ ಕೊಡುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.
ಯೋಗಿ ಅದಿತ್ಯಾ ಹೊಗಳಿದ ಪ್ರಸಾದ್:
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಡ್ಯದಲ್ಲಿ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಬಗ್ಗೆ ಬಹಳ ಅದ್ಭುತವಾಗಿ ಮಾತನಾಡಿದರು. ಉತ್ತರ ಪ್ರದೇಶದಲ್ಲಿ ಅವರ ಕಾರ್ಯ ವೈಖರಿ ಚೆನ್ನಾಗಿದೆ. ಕಾನೂನು ಸುವ್ಯಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ನಿಭಯಿಸುತ್ತಿದ್ದಾರೆ ಎಂದರು.
ಅಲ್ಲದೆ ಬಸವರಾಜ ಬೊಮ್ಮಾಯಿ ಉತ್ತಮವಾಗಿ ಆಡಳಿತ ಕೊಟ್ಟಿದ್ದಾರೆ ಯಾವುದೇ ಸಮಸ್ಯೆಗಳು ಬಂದರು ಕೂಲ್ ಆಗಿ ಪರಿಹಾರ ನೀಡುತ್ತಾ ಅತ್ಯುತ್ತಮ ಬಜೆಟ್ ಮಂಡನೆ ಮಾಡಿದ್ದಾರೆ ಇದಕ್ಕಿಂತ ಇನ್ನೇನು ಬೇಕು ಎಂದು ಪ್ರಶ್ನಿಸಿದರು.