ಸುದ್ದಿಮೂಲ ವಾರ್ತೆ ನವದೆಹಲಿ, ಡಿ.15:
ಮತ ಕಳವು ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆೆಗಳ ವಿರುದ್ಧ ಸುಳ್ಳಿಿನ ಸಂಕಥನ ಸೃಷ್ಟಿಿಸುತ್ತಿಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗಂಭೀರ ಎಚ್ಚರಿಕೆ ನೀಡಿದರು.
ರಾಜ್ಯಸಭೆಯಲ್ಲಿ ಸೋಮವಾರ ಈ ಕುರಿತ ಚರ್ಚೆಯಲ್ಲಿ ಪಾಲ್ಗೊೊಂಡು ಮಾತನಾಡಿದ ದೇವೇಗೌಡರು, ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿಿನ ಕಥೆಗಳನ್ನು ಪ್ರಚಾರ ಮಾಡುತ್ತಾಾ ಹೋದರೆ, ಮತದಾರರ ಮನಸ್ಸಿಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆೆಯದು ಮಾಡುವುದಿಲ್ಲ ಎಂದು ಹೇಳಿದರು.
ಪ್ರತಿಪಕ್ಷಗಳು ಪ್ರಧಾನಿಯವರ ಬಗ್ಗೆೆ ಹಾದಿ ಬೀದಿಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಕೆಟ್ಟದ್ದಾಗಿ ಟೀಕೆ ಮಾಡುತ್ತಿಿರುವ ಬಗ್ಗೆೆ ಮಾಜಿ ಪ್ರಧಾನಿಗಳು ಹರಿಹಾಯ್ದರು.
ನಮ್ಮದು ಬಹಳ ದೊಡ್ಡ ರಾಷ್ಟ್ರ. ಕಾಂಗ್ರೆೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರಬಹುದು. ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ ಮತ ಕಳವು ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ದೇವೇಗೌಡರು ಕಟುವಾದ ಶಬ್ದಗಳಲ್ಲಿ ಹೇಳಿದರು.
ಮತ ಕಳವು ಎಂಬ ಅಪಪ್ರಚಾರದ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೂಷಿಸುವ ಮೂಲಕ ಮತ್ತು ಮತದಾರರ ಮನಸ್ಸಿಿನಲ್ಲಿ ಅನುಮಾನವನ್ನು ಸೃಷ್ಟಿಿಸುವ ಮೂಲಕ ಪ್ರತಿಪಕ್ಷಗಳು ಏನು ಗಳಿಸಲಿವೆ ಎಂದು ಪ್ರಶ್ನಿಿಸಿದ ಮಾಜಿ ಪ್ರಧಾನಿಗಳು. ನಿಮ್ಮ ಮನಸ್ಸಿಿಗೆ ಏನಾಗಿದೆ. ಏನಾದರೂ ಸಮಸ್ಯೆೆ ಇದ್ದರೆ ಸರಿಪಡಿಸಿಕೊಳ್ಳಿಿ ಎಂದು ಪ್ರತಿಪಕ್ಷದವರಿಗೆ ಕಿವಿಮಾತು ಹೇಳಿದರು.
ನಾನು ಏಳು ದಶಕಗಳಿಗೂ ಹೆಚ್ಚಿಿನ ಸಾರ್ವಜನಿಕ ಜೀವನದಲ್ಲಿ ಚುನಾವಣೆಯಲ್ಲಿ ಸೋಲು ಗೆಲುವನ್ನು ಎದುರಿಸಿದ್ದೇನೆ. ನಾನು ಎಂದಿಗೂ ಮತ ಕಳವು ಅಂತಹ ವಿಷಯಗಳನ್ನು ಹೇಳಲಿಲ್ಲ ಎಂದು ಮಾಜಿ ಪ್ರಧಾನಿಗಳು ಒತ್ತಿಿ ಹೇಳಿದರು.
ಕೇರಳದಲ್ಲಿ 18,000 ಮತದಾರರ ಸೇರ್ಪಡೆಗೆ ಸಂಬಂಧಿಸಿದಂತೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಬರೆದ ಪತ್ರವನ್ನು ಅವರು ಉಲ್ಲೇಖಿಸಿದರು.
ನಾನು ಇದನ್ನು ಏಕೆ ಹೇಳುತ್ತಿಿದ್ದೇನೆಂದರೆ ನೆಹರು ಅವಧಿಯಲ್ಲಿಯೂ ಸಹ ಚುನಾವಣಾ ವ್ಯವಸ್ಥೆೆಯಲ್ಲಿ ಕೆಲವು ಲೋಪಗಳು ಇದ್ದವು ಎಂಬುದಾಗಿ ಜೂನ್ 1, 1996 ಮತ್ತು ಏಪ್ರಿಿಲ್ 21, 1997ರ ನಡುವೆ ಪ್ರಧಾನಿಯಾಗಿದ್ದ ದೇವೇಗೌಡರು ಹೇಳಿದರು.
ಮತದಾರರ ಪಟ್ಟಿಿಯಲ್ಲಿನ ಲೋಪಗಳನ್ನು ಪ್ರಸ್ತಾಾಪಿಸಿಯೂ ಕಾಂಗ್ರೆೆಸ್ ಪಕ್ಷವು ಇತ್ತೀಚಿಗೆ ಬಿಹಾರ ಚುನಾವಣೆಯಲ್ಲಿ ಸೋಲು ಎದುರಿಸಿತು . ಮತದಾರರ ಪಟ್ಟಿಿಯ ಕೂಲಂಕುಶ ಪರಿಶೀಲನೆಯ ನಂತರವೂ ಆ ರಾಜ್ಯದಲ್ಲಿ ಏನಾಯಿತು ಎಂಬುದನ್ನು ಸ್ವತಃ ಪ್ರತಿಪಕ್ಷ ನಾಯಕರು ಆಲೋಚಿಸಬೇಕು. ಆ ರಾಜ್ಯದಲ್ಲಿ ಕಾಂಗ್ರೆೆಸ್ ಪಕ್ಷಕ್ಕೆೆ ಆರು ಶಾಸಕರು ಸಿಕ್ಕಿಿದ್ದಾರೆ ಎಂದು ಮಾಜಿ ಪ್ರಧಾನಿಗಳು ಕಟುವಾಗಿ ಟೀಕಿಸಿದರು.
ಮತದಾರರ ಪಟ್ಟಿಿಯ ಪರಿಷ್ಕರಣೆ ಬಗ್ಗೆೆ ಪ್ರಧಾನಿಗಳ ವಿರುದ್ಧ ಪ್ರತಿಪಕ್ಷಗಳು ಆರೋಪಗಳನ್ನು ಮಾಡಲು ಅವರು ಏಕೆ ಬಯಸುತ್ತಾಾರೆ ಎಂದು ಖಾರವಾಗಿ ಪ್ರಶ್ನಿಿಸಿದ ದೇವೇಗೌಡರು. ದೇಶದಲ್ಲಿ ಚುನಾವಣಾ ಆಯೋಗವಿದೆ, ಸುಪ್ರೀೀಂ ಕೋರ್ಟ್ ಇದೆ. ಈ ಎಲ್ಲ ವಿಷಯಗಳನ್ನು ಸರಿಪಡಿಸಲು ಚುನಾವಣಾ ಆಯೋಗವು ಎಲ್ಲಾ ರಾಜ್ಯ ಘಟಕಗಳಿಗೆ ನಿರ್ದೇಶನ ನೀಡಿದೆ ಎಂದು ಅವರು ಒತ್ತಿಿ ಹೇಳಿದರು.
ರಾಷ್ಟ್ರದ ಜನರು ನರೇಂದ್ರ ಮೋದಿ ಅವರ ಸರಕಾರದ ಮೇಲೆ ಸಂಪೂರ್ಣ ವಿಶ್ವಾಾಸ ಹೊಂದಿದ್ದಾರೆ ಮತ್ತು ಮುಂದಿನ ಲೋಕಸಭೆ ಚುನಾವಣೆಯ ನಂತರವೂ ಅವರು ಮತ್ತೆೆ ಅಧಿಕಾರಕ್ಕೆೆ ಬರುತ್ತಾಾರೆ ಎಂದು ದೇವೇಗೌಡರು ಭವಿಷ್ಯ ನುಡಿದರು.
ರಾಜ್ಯ ಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ದೇವೇಗೌಡ ಮತ ಕಳವು ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ವಿಪಕ್ಷಗಳಿಗೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ

