ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ,ಆ.3: ಚಿಕ್ಕಬಳ್ಳಾಪುರ ಜಿಲ್ಲೆಯ 6 ತಾಲ್ಲೂಕುಗಳಿಗೆ ಅನ್ವಯಿಸುವಂತೆ ರೈತರ ಬೆಳೆ ವಿಮೆ ನೊಂದಣಿ ಅವಧಿಯನ್ನು ಆಗಸ್ಟ್ 7ರ ತನಕ ಕೇಂದ್ರ ಸರ್ಕಾರ ವಿಸ್ತರಿಸಿದೆ. ವಿಮೆ ಮಾಡಿಸುವ ಆಸಕ್ತ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಖಾತೆ ಪಾಸ್ ಬುಕ್, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ಆಯಾ ತಾಲ್ಲೂಕಿನ ತಮ್ಮ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ (ಖಾತೆ ಹೊಂದಿರುವ ಬ್ಯಾಂಕ್) ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೊಂದಾಣಿ ಮಾಡಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.