ಸುದ್ದಿಮೂಲ ವಾರ್ತೆ
ತುಮಕೂರು,ಮಾ.13: ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆಯು ರೈತ ಮಕ್ಕಳಿಗಾಗಿ ಮೇ 2 ರಿಂದ ಹಮ್ಮಿಕೊಂಡಿದ್ದ 10 ತಿಂಗಳ ತರಬೇತಿ
ಕಾರ್ಯಕ್ರಮವನ್ನು ಜೂನ್ 1 ರಿಂದ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಮೇ 23ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಗೆ ಆಯ್ಕೆ ಮಾಡಲು ಮೇ 25ರ ಬೆಳಿಗ್ಗೆ 11 ಗಂಟೆಗೆ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತರು ನಿಬಂಧನೆಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ http:horticulturedir.karnakaka.gov.in ಅಥವಾ ದೂ.ವಾ.ಸಂ. 0816-2278647ನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ರಘು ತಿಳಿಸಿದ್ದಾರೆ.