ಸುದ್ದಿಮೂಲ ವಾರ್ತೆ
ಸೂಲಿಬೆಲೆ, ಮೇ 19: ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿಯಲ್ಲಿ ಕೈಗೊಂಡಿರುವ ನಮ್ಮೂರು ನಮ್ಮ ಕೆರೆ ಯೋಜನೆಯಡಿಯಲ್ಲಿ ಕೆರೆಗಳ ಅಭಿವೃದ್ದಿಯಿಂದ ರೈತರ ಬದುಕು ಹಸನಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಜನಾ ನಿರ್ದೇಶಕರಾದ ಉಮಾರಬ್ಬ ಹೇಳಿದರು.
ಸೂಲಿಬೆಲೆ ಹೋಬಳಿಯ ಟಿ.ಅಗ್ರಹಾರ ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿಯಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷ ಆನಂದ್ಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಈ ಕೆರೆ ಜೀರ್ಣೊದ್ದಾರ ಕಾಮಗಾರಿಯಿಂದ ಭೂಮಿಯ ಅಂರ್ತಜಲ ಮಟ್ಟ ಹೆಚ್ಚುತ್ತದೆ ಇದರಿಂದ ಹೆಚ್ಚು ನೀರು ಕೆರೆಗಳಲ್ಲಿ ಸಂಗ್ರಹವಾಗುತ್ತದೆ. ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗುತ್ತದೆ ಎಂದರು.
ಜಿಪಂ ಮಾಜಿ ಸದಸ್ಯೆ ವೆಂಕಟಲಕ್ಷ್ಮಮ್ಮ, ಟಿ.ಆರ್.ಮುನಿಯಪ್ಪ, ಮುನಿರಾಜು, ತಾಲ್ಲೂಕು ಯೋಜನಾಧಿಕಾರಿ ಭೋಜಾ, ಕೃಷಿ ಮೇಲ್ವಿಚಾರಕ ಶಿವಕುಮಾರ್, ವಲಯ ಮೇಲ್ವಿಚಾರಕಿ ಪ್ರೇಮ ಇತರರು ಇದ್ದರು.