ಸುದ್ದಿಮೂಲ ವಾರ್ತೆ,
ಮೈಸೂರು, ಆ.19:ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮೈಸೂರು, ಮಂಡ್ಯ ಜಿಲ್ಲೆಗಳ ಆನೇಕ ಕಡೆ ಪ್ರತಿಭಟನೆಗಳು ಶನಿವಾರವು ಮುಂದುವರಿದಿದೆ. ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ಚಳುವಳಿ ನಡೆಸುತ್ತಿದ್ದ ನೂರಾರು ರೈತರನ್ನು ಪೊಲೀಸರು ಬಂಧಿಸಿದರು.
ಒಂದೆಡೆ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಕೆಆರ್ಎಸ್, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳ ನೀರಿನ ಮಟ್ಟದಲ್ಲಿ ಭಾರಿ ಕುಸಿತ ಕಂಡು ಬರುತ್ತಿದೆ. ಶನಿವಾರ ಬೆಳಗ್ಗೆ ಮಳೆ ಬಂತು. ಆದರೆ ,ಕೇವಲ ಒಂದೂವರೆ ಗಂಟೆ ಮಾತ್ರ ಸುರಿಯಿತು. ಆದು ಬಿರುಸಾಗಿ ಆಗಲಿಲ್ಲ. ಹೀಗೆ ಮಳೆ ದಿನೇ ದಿನೇ ಕೈ ಕೊಡುತ್ತಿದೆ. ಬೆಳೆ ಬೆಳೆಯಲು ಮತ್ತು ಕುಡಿಯುವ ನೀರಿಗೆ ತೊಂದರೆ ಆಗಬಹುದಾದ ಎಲ್ಲಾ ಲಕ್ಷಣಗಳು ಕಂಡು ಬರುತ್ತಿರುವುದು ಆತಂಕ ಹುಟ್ಟಿಸಿದೆ.
ರೈತರ ಬಂಧನ
ಕಬಿನಿ, ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಮೈಸೂರು- ಟಿ ನರಸೀಪುರ ರಾಷ್ಟ್ರೀಯ ಹೆದ್ದಾರಿ ಬಿಂದಿಗೆ ಕಾರ್ಖಾನೆ ಬಳಿ ರೈತರು ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್ ಮಾಡಿದರಿ. ರೈತರ ಭತ್ತದ ಬೆಳೆಗಳಿಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿದರು.
ನದಿಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ರಾಜ್ಯದ ರೈತರ ಹಿತರಕ್ಷಣೆ ಕಾಪಾಡಬೇಕು. ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ. ಬೇಕೇ ಬೇಕು ನ್ಯಾಯ ಬೇಕು ತಮಿಳುನಾಡಿಗೆ ನೀರು ನಿಲ್ಲಲೇ ಬೇಕು ಎಂದು ಘೋಷಣೆ ಕೂಗಿದರು.
ನಂತರ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಕಿರಗಸೂರು ಶಂಕರ್ ಹಾಗೂ ಕುರುಬೂರು ಸಿದ್ದೇಶ್ ಚಳುವಳಿ ಜಾಗದಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯದ ರೈತರ ಹಿತ ಕಾಯುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿಸಿದರು. ರಸ್ತೆಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡ ಕಾರಣ ಚಳುವಳಿ ನಿರತ ರೈತರನ್ನು ಪೊಲೀಸರು ಬಂಧಿಸಿ ಆನಂತರ ಬಿಡುಗಡೆ ಮಾಡಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಹಳ್ಳಿ ಕೆರೆಹುಂಡಿ ಭಾಗ್ಯರಾಜ್, ಕಿರಗಸೂರ್ ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಪ್ರಸಾದ್ ನಾಯಕ್, ಪ್ರದೀಪ್ ಕುರುಬೂರು, ರಾಜೇಶ್, ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ, ಅನಿಲ್ ಹೊಸೂರು, ಗೌರಿಶಂಕರ್, ವಾಜ್ ಕುಮಾರ್, ತರಕಾರಿ ನಿಂಗರಾಜು, ಅಪ್ಪಣ್ಣ, ಮಾದೇವ ಪ್ರಸಾದ್, ಜಾಲಹಳ್ಳಿ ರಾಜೇಶ್, ಉಮೇಶ್ ಇನ್ನು ಹಲವು ರೈತರು ಚಳುವಳಿಯಲ್ಲಿ ಭಾಗವಹಿಸಿದ್ದರು
ಜಲಾಶಯಗಳ ನೀರಿನ ಮಟ್ಟ ಭಾರಿ ಕುಸಿತ
ಮಂಡ್ಯ ,ಮೈಸೂರು, ಬೆಂಗಳೂರು ಭಾಗದ ಜೀವನಾಡಿ ಕೆಆರ್ಎಸ್ ಭರ್ತಿಯಾಗದೇ ಇದ್ದರೂ ಸರಕಾರ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ನೀರಿನ ಮಟ್ಟ ಕುಸಿತ ಕಂಡಿದೆ. ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಜಲಾಶಯದಲ್ಲಿ 107 ಅಡಿ ನೀರು ಮಾತ್ರ ಸಂಗ್ರಹವಾಗಿದೆ.
ಕಳೆದ ತಿಂಗಳು ಕೇರಳದ ವೈನಾಡಿನಲ್ಲಿ ಹೆಚ್ಚು ಮಳೆ ಆದ ಪರಿಣಾಮ, ಜೊತೆಗೆ ಮಡಿಕೇರಿ ಸುತ್ತಮುತ್ತ ಸತತ ಮಳೆ ಸುರಿದ ಕಾರಣ ಕೆಆರ್ ಎಸ್ ಅಣ್ಎಕಟ್ಟೆಗೆ ಹೆಚ್ಚು ನೀರು ಹರಿದು ಬಂದಿತ್ತು. ಹಾಗಾಗಿ 113 ಅಡಿ ತಲುಪಿತ್ತು. 15 ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯವೂ ಭರ್ತಿಯಾಗಿತ್ತು. ಇದೀಗ ಜಲಾಶಯದಲ್ಲಿ 5.5 ಅಡಿಯಷ್ಟು ನೀರು ಖಾಲಿಯಾಗಿದೆ.2,284 ಅಡಿ ಗರಿಷ್ಠಮಟ್ಟ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 78.50 ಅಡಿಯಷ್ಟು ನೀರಿದೆ