ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ,ಅ.19: ಸಮರ್ಪಕ ವಿದ್ಯುತ್ಗಾಗಿ ಚೇಳೂರಿನ ಚಾಕವೇಲು ಬೆಸ್ಕಾಂ ಮುಂದೆ ರೈತರಿಂದ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನದ್ಯಂತ ಬರದಿಂದ ಪರಿ ತಪಿಸುತ್ತಿರುವ ರೈತರಿಗೆ, ಕರೆಂಟ್ ಸರಿಯಾಗಿ ನೀಡುತ್ತಿಲ್ಲ ಎಂದು ಬೇಸತ್ತ ರೈತರು ಪ್ರತಿಭಟನೆ ನಡೆಸಿದರು.
ಈ ಹಿಂದೆ ಏಳು ಗಂಟೆ ನೀಡುತ್ತಿದ್ದ ವಿದ್ಯುತ್, ಕಡಿತಗೊಳಿಸಿ ಐದು ಗಂಟೆ ಮಾತ್ರ ನೀಡುತ್ತಿದ್ದಾರೆ. ಅದು ರಾತ್ರಿ ಸಮಯದಲ್ಲಿ ಮೂರು, ಹಗಲು ಎರಡು ಗಂಟೆ ವಿದ್ಯುತ್ ನೀಡುತ್ತಿದ್ದಾರೆ. ಇದು ಖಂಡನೀಯ, ರಾತ್ರಿ ನೀಡುವ ಬದಲು ಹಗಲಿನಲ್ಲಿ ವಿದ್ಯುತ್ ನೀಡಬೇಕು ಎಂದು ಪ್ರತಿಭಟನೆಯಲ್ಲಿ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಅಧಿಕಾರಿಗಳು ನಿಮ್ಮ ಬೇಡಿಕೆಗಳನ್ನ ಮೇಲಧಿಕಾರಿಗಳಿಗೆ ತಿಳಿಸಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಇದರಿಂದ ಪ್ರತಿಭಟನೆ ಕೈ ಬಿಟ್ಟ ರೈತರು, ಭರವಸೆ ಈಡೇರಿಸದೆ ಇದ್ದಲ್ಲಿ ಮತ್ತೆ ಪ್ರತಿಭಟನೆ ಮಾಡಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.