ಸುದ್ದಿಮೂಲ ವಾರ್ತೆ
ದೇವನಹಳ್ಳಿ, ಜು.30: ಒಂದೇ ಸೂರಿನಡಿ ರೈತರಿಗೆ ಬೇಕಾದ ರಸಗೊಬ್ಬರಗಳು ಜಿಲ್ಲೆಯಾದ್ಯಂತ ಸಕಾಲಕ್ಕೆ ದೊರೆಯುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೃಷಿ ಜಂಟಿ ನಿರ್ದೇಶಕಿ ಡಾ.ಲಲಿತಾ ರೆಡ್ಡಿ ತಿಳಿಸಿದರು.
ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿ ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್, ಟಿ.ಎ.ಪಿ.ಸಿ.ಎಂ.ಎಸ್ ಮತ್ತು ಕೃಷಿ ಇಲಾಖೆ. ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ರೈತರಿಗೆ ಪಿ.ಎಂ. ಕಿಸಾನ್ ಯೋಜನೆಯ 14 ನೇ ಕಂತಿನ ಆರ್ಥಿಕ ನೆರವನ್ನು ರಾಜಾಸ್ಥಾನದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸುತ್ತಿದ್ದು ಮತ್ತು ಸೊಸೈಟಿಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲಾ ಸಾಮಗ್ರಿಗಳನ್ನು ಒಂದೇ ಸೂರಿನಡಿ ದೊರೆಯಲು ಅನುಕೂಲ ಮಾಡಿದ್ದು , ರೈತರಿಗೆ ಬೇಕಾದ ರಸಗೊಬ್ಬರಗಳು ಜಿಲ್ಲೆಯಾದ್ಯಂತ ಸಕಾಲಕ್ಕೆ ದೊರೆಯುತ್ತಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು
ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಸಿ.ಇ.ಓ ನಿತಿನ್ ಕಂಟಕ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಅನೇಕ ಸೌಲಭ್ಯಗಳು ನೀಡುತ್ತಿದ್ದು , ರೈತರಿಗೆ ಬೇಕಾದ ಸಾಮಗ್ರಿಗಳನ್ನು ದೊಡ್ಡದೊಡ್ಡ ಮಳಿಗೆಗಳಲ್ಲಿ ದೊರೆಯುವಂತೆ ಮಾಡುತ್ತಿದ್ದು , ರೈತರು ಹೆಚ್ಚು ಹೆಚ್ಚು ಬೆಳೆಗಳನ್ನು ಬೆಳೆಯುವ ಎಲ್ಲಾ ವಿಚಾರಗಳನ್ನು ತಿಳಿಸುವ ಮತ್ತು ಅದರಿಂದ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಲಾಗುತ್ತಿದೆ ಎಂದು ತಿಳಿಸಿದರು.
ಇದೆ ವೇಳೆ ದೇವನಹಳ್ಳಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಶೀಲಮ್ಮ, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ದೇವರಾಜ್, ಉಪಾಧ್ಯಕ್ಷ ಈರಪ್ಪ ನಿರ್ದೇಶಕರಾದ ಗಂಗಾಧರ್, ಚನ್ನಕೃಷ್ಣಪ್ಪ, ರಮೇಶ್, ರಾಮಮೂರ್ತಿ, ಚಂದ್ರಶೇಖರ್, ಭಾಗ್ಯಮ್ಮ, ರೈತರು ಸೇರಿದಂತೆ ಅನೇಕರು ಇದ್ದರು.