ಸುದ್ದಿಮೂಲ ವಾರ್ತೆ
ಮಾಲೂರು, ಜು 25 :ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಶಾಸಕ ಕೆ.ವೈ ನಂಜೇಗೌಡ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ
ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿಗಳ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಅನುಷ್ಠಾನಗೊಳಿಸಿದೆ. ಅದರಲ್ಲಿ ಶಕ್ತಿ ಯೋಜನೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಮಾಡಲು ಅನುಕೂಲ ಕಲ್ಪಸಿದ್ದು, ಜನ ಸಾಮಾನ್ಯರು ಪ್ರವಾಸ ಮಾಡಿದ್ದರಿಂದ ಪ್ರವಾಸಿ ಸ್ಥಳ ಮತ್ತು ದೇವಾಲಯಗಳಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಯಾಗಿದೆ.
ಗೃಹಜೋತಿ ಯೋಜನೆ ಅಡಿ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಉಚಿತ ವಿದ್ಯುತ್ ಲಭಿಸಲಿದೆ. ಅನ್ನಭಾಗ್ಯ ಯೋಜನೆ ಅಡಿ 5 ಕೆ.ಜಿ ಅಕ್ಕಿ ಜತೆಗೆ ಇನ್ನೂಳಿದ
5 ಕೆ.ಜಿ ಅಕ್ಕಿ ಬದಲು ಬಿಪಿಎಲ್ ಅಂತ್ಯೋದಯ ಕಾರ್ಡ್ ಪಡಿತದಾರರಿಗೆ ಕುಟುಂಬದ ಎಲ್ಲಾ ಸದ್ಯಸರಿಗೆ ತಲಾ 34 ರೂ.ಗಳಂತೆ ಒಬ್ಬರಿಗೆ ಪ್ರತಿ ತಿಂಗಳು 180 ರೂ.ಗಳ ಹಣವನ್ನು ಪಡಿತರ ಚೀಟಿಯ ಯಜಮಾನರ ಖಾತೆಗೆ ನೇರವಾಗಿ ಪಾವತಿಸಲಾಗುವುದು. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆಯ ಒಡತಿಗೆ 2 ಸಾವಿರ ಗಳನ್ನು ನೀಡುವ ಗ್ರಹ ಲಕ್ಷ್ಮಿ ಯೋಜನೆ ಪ್ರಕ್ರಿಯೆ ಚಾಲನೆಯಲ್ಲದೆ ಎಂದರು.
ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೆ ಸರ್ಕಾರದ ಯೋಜನೆಗಳ ಅನುಷ್ಠಾನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಪ್ರಾಮಾಣಿಕ ವಾಗಿ ಜನರ ಕೆಲಸ ಮಾಡದ
ಅಧಿಕಾರಿಗಳನ್ನು ಮುಲಾಜಿಲ್ಲದೆ ವರ್ಗಾವಣೆ ಮಾಡಿಸಿ ಕೆಲಸ ಮಾಡುವ ಅಧಿಕಾರಿಗಳನ್ನು ಉಳಿಸಿಕೊಂಡು ಸರ್ಕಾರಿ ಸಾರ್ವಜನಿಕ ಕೆಲಸ ಕಾರ್ಯಗಳು ಮಾಡಲು ಅವಕಾಶ ಕಲ್ಪಿಸಲಾಗುವುದು. ತಾಲೂಕಿನ ಸರ್ಕಾರಿ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಅವಕಾಶ ನೀಡದೆ ನೇರವಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಆಗಮಿಸುವವರನ್ನು ಅಲೆಸದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸಗಳನ್ನು ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ. ರಮೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.