ಸುದ್ದಿಮೂಲ ವಾರ್ತೆ
ದೇವನಹಳ್ಳಿ,ಸೆ.26:ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದೇವನಹಳ್ಳಿಯ ಪಶು ಆಸ್ಪತ್ರೆ ಬಳಿ ಏರ್ಪಡಿಸಲಾಗಿದ್ದ 4 ನೇ ಸುತ್ತಿನ ಉಚಿತ ಕಾಲು ಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಫಲಾನುಭವಿ ರೈತರಿಗೆ 2 ಹೆಚ್.ಪಿ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ ಮತ್ತು 2 ನೆಲ ಹಾಸುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಜಿ.ಪಂ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಚಿಂತಾಮಣಿ ಶ್ರೀನಿವಾಸ್, ಬಚ್ಚೇಗೌಡ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ತಾಲ್ಲೂಕಿನ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ಎನ್, ತಹಶೀಲ್ದಾರ್ ಶಿವರಾಜ್, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.