ಸುದ್ದಿಮೂಲ ವಾರ್ತೆ
ಮೈಸೂರು, ಆ.21:ರಾಜ್ಯದ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಮಿಳುನಾಡಿಗೆ ಏಕಾಏಕಿ ನೀರು ಹರಿಸಲಾಗುತ್ತಿದೆ. ʼಊರೆಲ್ಲ ಕೊಳ್ಳೆ ಹೋಡೆದ ಮೇಲೆ ದೊಡ್ಡಿ ಬಾಗಿಲು ಹಾಕಿಕೊಂಡರುʼ ಎನ್ನುವಂತೆ ಈಗ ಸರ್ಕಾರ ಸರ್ವ ಪಕ್ಷ ಸಭೆ, ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುತ್ತೇವೆ ಎಂದು ರಾಗ ತೆಗೆಯುತ್ತಿದೆ. ನೀರು ಬಿಡುವುದಕ್ಕೆ ಮುನ್ನವೇ ಇದನ್ನು ಮಾಡಬಹುದಿತ್ತು ಅಲ್ಲವೇ? ಎಂದು ಅವರು ಕಿಡಿಕಾರಿದರು.
ಮೈಸೂರಿನಲ್ಲಿ ಸುತ್ತೂರು ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಶ್ರೀ ಡಾ.ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಮೂಲಕ ಕಾಂಗ್ರೆಸ್ ಕನ್ನಡಿಗರಿಗೆ ಮಕ್ಮಲ್ ಟೋಪಿ ಹಾಕಿದೆ. ಕಾಂಗ್ರೆಸ್ಸಿಗರು ಈಗ ನಮ್ಮ ನೀರು ತಮಿಳುನಾಡಿನ ಹಕ್ಕು ಎಂದು ಹೇಳುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.