ಸುದ್ದಿಮೂಲ ವಾರ್ತೆ
ಬೆಂಗಳೂರು, ಜು, 17: ವಿಧಾನಸೌಧದಲ್ಲಿಂದು ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿಇಓ ಬ್ರಾಂಡ್ ಚೆಂಗ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮಾತುಕತೆ ನಡೆಸಿತು.
ಈ ಸಂಸ್ಥೆಯ ಫಾಕ್ಸ್ ಕಾನ್ ಸಂಸ್ಥೆಯ ಅಂಗ ಸಂಸ್ಥೆಯಾಗಿದ್ದು, ಆಪಲ್ ಫೋನ್ನ ಹೊರ ಕವಚ ತಯಾರಿಸುವ ಕೆಲಸ ಮಾಡಲಿದೆ. ಸುಮಾರು 8,800 ಕೋಟಿ ರೂಪಾಯಿ ಹೂಡಿಕೆ ಮಾಡಲು ಆಸಕ್ತಿ ತೋರಿಸಿದೆ. ತುಮಕೂರಿನ ಬಳಿ ಇರುವ ಜಪಾನೀಸ್ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಅಗತ್ಯ 1000 ಎಕರೆ ಭೂಮಿ ಇದ್ದು, ಉದ್ದಿಮೆ ಸ್ಥಾಪಿಸಲು ಒಳ್ಳೆಯ ವಾತಾವರಣವಿದ್ದು, ಇದಕ್ಕೆ ರಾಜ್ಯ ಸರ್ಕಾರ ಕೂಡ ಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.