ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.23: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕುರುಬರ ಹಳ್ಳಿಯಲ್ಲಿ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ಹಾಗೂ ಬಿಬಿಎಂಪಿ ಮತ್ತು ನೈಪುಣ್ಯ ಫೌಂಡೇಶನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ಆರೋಗ್ಯ ಶಿಬಿರಕ್ಕೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ಚಾಲನೆ ನೀಡಿದರು. ಈ ಶಿಬಿರದಲ್ಲಿ ಬಿಪಿ, ಶುಗರ್, ಇಸಿಜಿ, ಥೈರಾಯ್ಡ್ , ಕಣ್ಣಿನ ತಪಾಸಣೆ ಸೇರಿದಂತೆ ಹಲವು ಚಿಕಿತ್ಸೆಗಳಿಗೆ ನುರಿತ ವೈದ್ಯರ ಸಲಹೆ ಹಾಗೂ ತಪಾಸಣೆ ಲಭ್ಯವಿದ್ದು, ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಎನ್ ಜಯರಾಂ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ, ಜಯರಾಂ, ವೈದ್ಯ, ಡಾ, ನಾಗೇಂದ್ರ, ರಘು ನಾಗರಾಜ್, ನಿಸರ್ಗ ಜಗದೀಶ್, ಆರ್ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.