ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಅ.2: ನರೇಗಾ ಯೋಜನೆ ಸಹಿತ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಪಂಗೆ 2022-23ನೇ ಸಾಲಿನ ಗಾಂಧಿಸೇವಾ ಪ್ರಶಸ್ತಿ ಲಭಿಸಿದ್ದು, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ ಪಾಪಣ್ಣ, ಉಪಾಧ್ಯಕ್ಷ ಬಿ.ಕೆ.ಲೋಕೇಶ್, ಪಿಡಿಒ ಎ.ಶೈಲಾ ಹಾಗೂ ಕಾರ್ಯದರ್ಶಿ ಸಿ.ರಾಜಣ್ಣ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿಯನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃಧ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಮಹಾದೇವನ್, ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಪ್ರಿಯಾಂಕ್ ಮೇರಿ ಫ್ರಾನ್ಸಿಸ್ ಹಾಗೂ ಮಳಮಾಚನಹಳ್ಳಿ ಗ್ರಾಪಂಯ ಸದಸ್ಯರಾದ ವರಲಕ್ಷ್ಮಮ್ಮ, ಸುನೀತಾ, ಸರಸ್ವತಮ್ಮ, ಚಂದ್ರಪ್ಪ, ದೇವರಾಜಪ್ಪ, ಮುರಳಿ, ತಾಪಂ ಮಾಜಿ ಅಧ್ಯಕ್ಷ ರಾಜಶೇಖರ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಮಹೇಂದ್ರ ತಿಲಕ್, ಕರ ವಸೂಲಿಗಾರ ಸುರೇಶ್, ಮುಖಂಡರಾದ ಪಾಪಣ್ಣ ಮತ್ತಿತರರು ಉಪಸ್ಥಿತರಿದ್ದರು.