ಸುದ್ದಿಮೂಲ ವಾರ್ತೆ
ಬಳ್ಳಾರಿ :ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವ ಸಂಬಂಧ ಸಾರ್ವಜನಿಕರ ದೂರುಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.
ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ ೦೮೩೯೨-೨೭೭೧೦೦ ಮತ್ತು ೧೯೫೦ ಕರೆ ಮಾಡಿ ತಿಳಿಸಿಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.