ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಏ24: ರಾಜ್ಯದಲ್ಲಿನ ಬಿಜೆಪಿಯ ಶೇ 40% ಸರ್ಕಾರವನ್ನು ಕಿತ್ತೆಸೆದು ಜನಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ತ್ ಹೇಳಿದರು.
ಕೆ.ಆರ್.ಪುರದ ಬಸವನಪುರ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಮೋಹನ್ ನೇತೃತ್ವದಲ್ಲಿ ಮಾಜಿ ನಗರಸಭಾ ಸದಸ್ಯ ಶೀಗೆಹಳ್ಳಿ ಬಾಲಕೃಷ್ಣ ಅನ್ಯ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆ ಹಾಗೂ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿ ಸರ್ಕಾರ ಭ್ರಷ್ಟಚಾರದಿಂದಾಗಿ ಮನೆಮಾತಾಗಿದೆ. ಇಂತಹ ಸರ್ಕಾರದಿಂದ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ಬಂದರೆ ಜನರಿಗೆ ನೆಮ್ಮದಿ ದೊರಕಲಿದೆ. ಕಾಂಗ್ರೆಸ್ ಜನರ ಧೋರಣೆ ಎತ್ತಿಹಿಡಿಯುವ ಪಕ್ಷ ಎಂದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಮೋಹನ್, ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದೆ. ಈ ಬಾರಿ ಕಾಂಗ್ರೆಸ್ ಕ್ಷೇತ್ರದಲ್ಲಿ ಜಯಭೇರಿ ಬಾರಿಸಲಿದೆ ಎಂದರು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ, ಕಾಂಗ್ರೆಸ್ ಮುಖಂಡರಾದ ಮಂಜುನಾಥ್, ಡಿ.ಎ.ಗೋಪಾಲ್ ಇದ್ದರು.