ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.20:
ಜಿಲ್ಲೆೆಯಲ್ಲಿ ರೈತರ ಆದಾಯ ಹೆಚ್ಚಿಿಸಲು ವಿಜ್ಞಾಾನಿಗಳು ಬಹುಬೆಳೆ ಪದ್ಧತಿಯ ತರಬೇತಿ ಆಯೋಜಿಸಿ, ರೈತರಿಗೆ ಮಾಹಿತಿ ನೀಡಬೇಕು ಎಂದು ರಾಯಚೂರಿನ ಕೃಷಿ ವಿಜ್ಞಾಾನಗಳ ವಿಶ್ವವಿದ್ಯಾಾಲಯದ ಕುಲಪತಿ ಡಾ. ಹನುಮಂತಪ್ಪ ಅವರು ತಿಳಿಸಿದ್ದಾಾರೆ.
ಬಳ್ಳಾಾರಿ ಐ.ಸಿ.ಎ.ಆರ್-ಕೃಷಿ ವಿಜ್ಞಾಾನ ಕೇಂದ್ರದಲ್ಲಿ ನಡೆದ 25ನೇ ವೈಜ್ಞಾಾನಿಕ ಸಲಹಾ ಸಮಿತಿ ಸಭೆ ಉದ್ಘಾಾಟಿಸಿ ಅವರು ಮಾತನಾಡಿದರು.
ವಿಜ್ಞಾಾನಿಗಳು ಸ್ಥಳೀಯವಾಗಿ ಅಗತ್ಯವಿರುವ ತಂತ್ರಜ್ಞಾಾನಗಳ ಬಗ್ಗೆೆ ಮಾಹಿತಿ ಸಂಗ್ರಹಿಸಿ, ಅದರ ಆಧಾರದ ಮೇಲೆ ಮುಂದಿನ ವರ್ಷದ ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.
ರಾಯಚೂರಿನ ಕೃಷಿ ವಿಜ್ಞಾಾನಗಳ ವಿಶ್ವವಿದ್ಯಾಾಲಯದ ವಿಸ್ತರಣಾ ನಿರ್ದೇಶಕ ಡಾ.ಎ.ಆರ್. ಕುರುಬರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್, ಬಳ್ಳಾಾರಿ ಕೃಷಿ ವಿಜ್ಞಾಾನ ಕೇಂದ್ರದ ಹಿರಿಯ ವಿಜ್ಞಾಾನಿ ಹಾಗೂ ಮುಖ್ಯಸ್ಥ ಡಾ. ಪಾಲಯ್ಯ ಪಿ. ಅವರು, ಪ್ರಸ್ತುತ ವರ್ಷದಲ್ಲಿ ಕೈಗೊಂಡ ಕಾರ್ಯಕ್ರಮಗಳ ವರದಿ ಮತ್ತು 2024-25ರ ಕೃಷಿ ವಿಜ್ಞಾಾನ ಕೇಂದ್ರದ ಚಟುವಟಿಕೆಗಳನ್ನು ಮಂಡಿಸಿದರು.
ಗೃಹ ವಿಜ್ಞಾಾನಿ ಡಾ.ರಾಜೇಶ್ವರಿ ಮಣ್ಣು ವಿಜ್ಞಾಾನಿ ಡಾ.ರವಿ ಎಸ್. ಅವರು ಮಾತನಾಡಿದರು.
ಸಭೆಯಲ್ಲಿ ಹಗರಿ ಕೃಷಿ ಕಾಲೇಜಿನ ಪ್ರಭಾರ ಅಧಿಕಾರಿ ಡಾ.ರವಿ ಶಂಕರ್, ಪಶು ವೈದ್ಯಕೀಯ ಪ್ರಾಾಧ್ಯಾಾಪಕ ಡಾ.ರಮೇಶ್, ರಾಯಚೂರು ಕೃಷಿ ವಿಜ್ಞಾಾನಿಗಳ ವಿಶ್ವವಿದ್ಯಾಾಲಯ ಸಹ ಸಂಶೋಧಕ ಡಾ.ಜಯಪ್ರಕಾಶ್ ನಿಡುಗುಂದಿ, ನಬಾರ್ಡ್ ಅಧಿಕಾರಿ ಯುವರಾಜ್ ಸೇರಿದಂತೆ ತೋಟಗಾರಿಕೆ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗಳ ಅಧಿಕಾರಿಗಳು, ಸಭೆಯ ಸದಸ್ಯರು ಹಾಗೂ ಪ್ರಗತಿಪರ ರೈತರಾದ ಸಮುದ್ರರಾಜ್, ರವಿಕುಮಾರ್ ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳು, ರೈತರು ಮತ್ತು ಕೃಷಿ ವಿಜ್ಞಾಾನ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿದ್ದರು.
‘ರೈತರಿಗೆ ಬಹುಬೆಳೆ ಪದ್ಧತಿಯ ಮಾಹಿತಿ ನೀಡಿರಿ’

