ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಕುರಿತು ಆದೇಶ ಹೊರಬಿದ್ದಿದೆ.
ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು. ಬಳಿಕ ಕೆಲವೇ ತಾಸುಗಳಲ್ಲಿ ಮನೆಒಡತಿಗೆ ಮಾಸಿಕ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸುವ ಮೂಲಕ ಐದು ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜಾರಿ ಮಾಡಿದಂತೆ ಆಗಿದೆ.