ಸುದ್ದಿಮೂಲ ವಾರ್ತೆ
ಬೆಂಗಳೂರು,ಮಾ.30 :
ಸರ್ಕಾರವು ಮೂರ್ಚ್ ತಿಂಗಳಿನಿಂದ ಸಾರಿಗೆ ನೌಕರರ ನೂತನ ವೇತನವನ್ನು ನೀಡುವಂತೆ ಆದೇಶ ಹೊರಡಿಸಿದೆ. ಈ ಹಿಂದೆ ವೇತನ ಹೆಚ್ಚಳ ಕುರಿತು ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಇಂದು 4 ನಿಗಮಗಳ ಸಾರಿಗೆ ನೌಕರರ ವೇತನವನ್ನು ಹೆಚ್ಚಿಸಲಾಗಿದೆ.
ಕರ್ನಾಟಕ ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ, ಮಾರ್ಚ್ 30 ರಂದು ಸರ್ಕಾರ ಹೊರಡಿಸಿದ ಆದೇಶದ ಮೇರಿಗೆ ಮಾರ್ಚ್ ತಿಂಗಳಿನಿಂದ ನೂತನ ಆದಾಯವನ್ನು ನೀಡುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಾರಿಗೆ ನೌಕರ 4 ನಿಗಮಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ ನೌಕರರಿಗೆ ಶೇ 15% ರಷ್ಟು ಆದಾಯವನ್ನು ಹೆಚ್ಚಿಸಲಾ್ಗಿದೆ.
ಸಾರಿಗೆ ನೌಕರರು 25% ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿದ್ದರು ಆದರೆ ಸರ್ಕಾರ ಮಾರ್ಚ್ 28ರಂದು ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು, ಅದರಂತೆ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳು, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ನಾಲ್ಕೂ ನಿಗಮಗಳ ಅಧಿಕಾರಿಗಳ ಸೇರಿ ಸಭೆ ನಡೆಸಿದ್ದರು. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಎಂದು ನೌಕರರ ಮನವೊಲಿಸಲು ಪ್ರಯತ್ನಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಶೇ.15 %ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿ ಸಾರಿಗೆ ನೌಕರರನ್ನು ಒಪ್ಪಿಸಲಾಯಿತು.