ಸುದ್ದಿಮೂಲ ವಾರ್ತೆ
ಆನೇಕಲ್, ನ. 04 : ತಾಲೂಕಿನ ಕೊಮ್ಮಸಂದ್ರ ಗ್ರಾಮದಲ್ಲಿ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಯ 2023-2024ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆಯನ್ನು ಆಯೋಜಿಸಲಾಗಿತ್ತು.
ಮೊದಲನೆ ಸುತ್ತಿನ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಳ ದಶರಥ್ ಅಧ್ಯಕ್ಷ ವಹಿಸಿದ್ದರು. ಗ್ರಾಮಸಭೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದೆ ಸಾರ್ವಜನಿಕರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಹಾಗೆಯೇ ಅಧಿಕಾರಿಗಳು ಸಹ ತಮ್ಮ ತಮ್ಮ ಇಲಾಖೆಯಲ್ಲಿ ದೊರೆಯುವಂತಹ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಗಳನ್ನು ನೀಡಿದರು.
ಕೊಮ್ಮಸಂದ್ರ ಗ್ರಾಮದಲ್ಲಿ ದಿನನಿತ್ಯ ವಿದ್ಯುತ್ ಸಮಸ್ಯೆ ಇದ್ದು ವಿದ್ಯುತ್ ತಂತಿಗಳು ಮರಗಳ ಮತ್ತು ಪೊದೆಗಳ ಮಧ್ಯ ವಿದ್ಯುತ್ ತಂತಿಗಳು ಹಾದುಹೋಗಿರುವುದರಿಂದ ದಿನನಿತ್ಯ ವಿದ್ಯುತ್ ಸಮಸ್ಯೆ ಇದೆ ಎಂದು ಅಧಿಕಾರಿಗಳಿಗೆ ಎರಡು ವರ್ಷಗಳ ಕಾಲ ಸಮಸ್ಯೆ ಹೇಳಿದರು ಇಲ್ಲಿಯ ತನಕ ಅಧಿಕಾರಿಗಳು ನಮ್ಮ ವಿದ್ಯುತ್ ವ್ಯತ್ಯಾಸವನ್ನು ಸರಿ ಮಾಡಿಕೊಡಲಿಲ್ಲ ಎಂದು ಗ್ರಾಮಸ್ಥರು ಆಕ್ರೋಶಗೊಂಡರು.
ಕಾರ್ಯಕ್ರಮದಲ್ಲಿ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜಪ್ಪ ಕೊಮ್ಮಸಂದ್ರ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಹರೀಶ್ ರೆಡ್ಡಿ ಕೊಮ್ಮಸಂದ್ರ ಟಿಡಿಓ, ರಂಗಸ್ವಾಮಿ, ಕಾರ್ಯದರ್ಶಿ ಶ್ರೀನಿವಾಸಯ್ಯ, ಲೆಕ್ಕ ಸಹಾಯಕ ಶಿವಕುಮಾರ್ ಹಾಗೂ ಇಲಾಖೆ ಅದಿಕಾರಿಗಳು ಮತ್ತು ಪಂಚಾಯಿತಿ ಸಿಬ್ಬಂದಿ ವರ್ಗ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.