ಸುದ್ದಿಮೂಲ ವಾರ್ತೆ
ಬೇತಮಂಗಲ,ಆ.19: ವೇಣುಗೋಪಾಲ ಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯರಾದ ವೀರೇಂದ್ರ ಹೆಗ್ಗಡೆ ಅವರು 3 ಲಕ್ಷ ರೂ. ಅನುದಾನ ನೀಡಿದ್ದಾರೆ.
ಕೆಜಿಏಫ್ ತಾಲೂಕಿನ ಟಿ. ಗೊಲ್ಲಹಳ್ಳಿ ಗ್ರಾಮಪಂಚಾಯಿತಿ ಬಡಮಕನ ಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ರೂ. ಮೊತ್ತದ ಅನುದಾನವನ್ನು ವೀರೇಂದ್ರ ಹೆಗ್ಗಡೆಯವರು ನೀಡಿರುತ್ತಾರೆ ಎಂದು ಜಿಲ್ಲೆಯ ನಿರ್ದೇಶಕ ಪದ್ಮಯ್ಯ ತಿಳಿಸಿದರು.
ಕ್ಷೇತ್ರದಿಂದ ಮಂಜೂರಾದ ಹಣವನ್ನು ವೇಣುಗೋಪಾಲ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ್ ಅವರಿಗೆ ನೀಡಲಾಗಿದೆ. ಪ್ರತಿವಾರವೂ ಇಂತಹ ಹಲವಾರು ದೇವಸ್ಥಾನಗಳಿಗೆ ಶ್ರೀ ಕ್ಷೇತ್ರದ ವತಿಯಿಂದ ಅನುದಾನವನ್ನು ವಿರೇಂದ್ರ ಹೆಗ್ಗಡೆ ಅವರು ನೀಡುತ್ತಿದ್ದಾರೆ. ಅದೇ ರೀತಿಯಲ್ಲಿ ಕೋಲಾರ ಜಿಲ್ಲೆಗೆ ಪ್ರತಿವಾರವೂ ಹತ್ತರಿಂದ ಇಪ್ಪತ್ತು ಲಕ್ಷದವರೆಗೆ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಲಾಗುತ್ತಿದೆ ಎಂಬ ಮಾಹಿತಿ ನೀಡಿದರು.
ಕೆಜಿಏಫ್ ತಾಲೂಕಿನ ಯೋಜನಾಧಿಕಾರಿ ಮಹದೇವ್ ಮಾತನಾಡಿ, ಸಮಾಜದ ಹತ್ತು ಹಲವಾರು ಕಾರ್ಯಕ್ರಮಗಳನ್ನು ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಜನರ ಬಳಿಗೆ ಮುಟ್ಟುವಂತಹ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು,ಸ್ವಸಹಾಯ ಹಾಗು ಪ್ರಗತಿ ಬಂಧು ತಂಡಗಳ ಸದಸ್ಯರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರಾದ ರವೀಂದ್ರ ಹಾಗೂ ಸೇವಾಪ್ರತಿನಿಧಿ ಮಾಲತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.