ಸುದ್ದಿಮೂಲ ವಾರ್ತೆ ಬೆಂಗಳೂರು, ಜ.28:
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಸುವರ್ಣ ಕನ್ನಡ ಭವನದ ಮುಂದುವರೆದ ಕಾಮಗಾರಿಗೆ ಅನುಮೋದಿತ ಮೊತ್ತಕ್ಕಿಿಂತ ಹೆಚ್ಚುವರಿಯಾಗಿ 80 ಲಕ್ಷ ರೂ.ಗಳನ್ನು ಒದಗಿಸುವಂತೆ ಕೋರಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ವಿಧಾನಸಭೆಯ ಪ್ರಶ್ನೋೋತ್ತರ ಕಲಾಪದ ವೇಳೆಯಲ್ಲಿ ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಅವರ ಪ್ರಶ್ನೆೆಗೆ ಉತ್ತರಿಸಿದ ಸಚಿವರು ಕೊಳ್ಳೇಗಾಲದ ಸುವರ್ಣ ಕರ್ನಾಟಕ ಭವನ ಕಾಮಗಾರಿಯನ್ನು ಪೂರ್ಣಗೊಳಿಸಲ ಪರಿಸ್ಕ7ತ ಅಂದಾಜು ಪಟ್ಟಿಿಯಂತೆ 186.49 ಲಕ್ಷ ರೂ. ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಈಗಾಗಲೇ ಸದರಿ ಕಾಮಗಾರಿಗೆ ಬಿಡುಗಡೆಯಾಗಿರುವ 125 ಲಕ್ಷ ರೂ. ಗಳನ್ನು ಹೊರತುಪಡಿಸಿ ಬಾಕಿಯಿರುವ ಅನುದಾನ 61.49 ಲಕ್ಷ ರೂ.ಗಳಲ್ಲಿ 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ 80 ಲಕ್ಷ ರೂ. ಗಳ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

