ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜು 20 : ಗೃಹಲಕ್ಷ್ಮಿಯೋಜನೆ ನೋಂದಣಿ ಕಾರ್ಯಕ್ಕೆ ಸಾಂಕೇತಿಕವಾಗಿ ಶಾಸಕ ಬಿ.ಎನ್ ರವಿಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇರುವ ಸೇವಾ ಕೇಂದ್ರಗಳಲ್ಲಿ ಎಲ್ಲಾ ಅಕ್ಕ-ತಂಗಿಯರು ನೋಂದಣಿ ಮಾಡಿಸಿ ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸುಮಿತ್ರ ರಮೇಶ್, ತಹಶೀಲ್ದಾರ್ ಬಿ.ಎನ್ ಸ್ವಾಮಿ, ಪೌರಯುಕ್ತ ಶ್ರೀಕಾಂತ್, ಸಿ ಡಿ ಪಿ ಓ ನವ್ತಾಜ್ ಮುಂತಾದವರು ಹಾಜರಿದ್ದರು.