ಸುದ್ದಿಮೂಲ ವಾರ್ತೆ
ಬೆಂಗಳೂರು,ನ.27: ಮಲ್ಲೇಶ್ವರದ ಕಾಡುಮಲ್ಲೇಶ್ವರ ಗೆಳಯರ ಬಳಗ ಮುಜಾರಾಯಿ ಇಲಾಖೆ ಸಹಕಾರದಲ್ಲಿ ಬೆಂಗಳೂರುನಗರ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಶುಭಾ ಸಂದರ್ಭದಲ್ಲಿ ಪ್ರತಿವರ್ಷದಂತೆ ಡಿ. 2 ರಿಂದ 4 ರವರಗೆ ಕಡಲೆಕಾಯಿ ಪರಿಷೆ ಏರ್ಪಡಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಗೆಳೆಯರ ಬಳಗದ ಅಧ್ಯಕ್ ಬಿ.ಕೆ.ಶಿವರಾಂ ಮಾತನಾಡಿ, ಮಲ್ಲೇಶ್ವರ ಕಾಡುಮಲ್ಲೇಶ್ವರದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಜರುಗಲಿದೆ. 800ಕೆಜಿ ಕಡಲೆಕಾಯಿಗಳಿಂದ ಶೃಂಗಾರಿಸಿದ 20 ಎತ್ತರ 20 ಉದ್ದದ ನಂದಿಯನ್ನು ಇಡಲಾಗುತ್ತದೆ. ಡಿ.2ರಂದು ಬೆಳಗ್ಗೆ 11ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವರು ಕಡಲೆಕಾಯಿ ಪರಿಷೆ ಉದ್ಘಾಟನೆ ಮತ್ತು ಹಸಿರು ಚೈತನ್ಯೋತ್ಸವ ಗಿಡ ಮೂಲಕ ಚಾಲನೆ ನೀಡಲಿದ್ದಾರೆ.
ಸಂಜೆ ಜಿತ್ವಾವನ ಮಹಿಳಾ ಯಕ್ಷಗಾನ ಮಂಡಳಿ ಶ್ರೀಮತಿ ಶೈಲಜಾ ಜೋಶಿ ಮತ್ತು ತಂಡದವರಿಂದ ಯಕ್ಷಗಾನ.
ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ತಮಿಳುನಾಡು, ಆಂಧ್ರ, ತೆಲಂಗಾಣ ನಮ್ಮ ರಾಜ್ಯದಿಂದ ನೂರಾರು ರೈತರು ಕಡಲೆಕಾಯಿ ಪರಿಷೆ ಭಾಗವಹಿಸಲಿದ್ದಾರೆ. 200 ಮಳಿಗೆಗಳಲ್ಲಿ ರೈತರು ಬೆಳದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳು ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಪ್ಲಾಸ್ಟಿಕ್ ಮುಕ್ತಕ್ಕೆ ಜನರ ಸಹಕಾರ ನೀಡಬೇಕು.ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಿಸಲಾಗುವುದು ಸರಿಸುಮಾರು 8ಲಕ್ಷ ಜನರು ಪರಿಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾಡುಮಲ್ಲೇಶ್ವರ ಗೆಳಯರ ಬಳಗ ಅಧ್ಯಕ್ಷರಾದ ಬಿ.ಕೆ.ಶಿವರಾಂ. ಕಾಂಗ್ರೆಸ್ ಪಕ್ಷದ ಮುಖಂಡರಾದ ಅನೂಪ್ ಅಯ್ಯಂಗಾರ್ ರವರು, ಸಮಾಜ ಸೇವಕರಾದ ಚಂದ್ರಶೇಖರ್ ನಾಯ್ಡು, ಹಿಮಾಂಶು ಶಾಲೆಯ ಪ್ರಾಂಶುಪಾಲರಾದ ಚಂದ್ರಮೌಳಿ, ಅರ್ಚಕರಾದ ಗಂಗಾಧರ್ ದೀಕ್ಷಿತ್ , ಶಶಿಧರ್ ರವರು ಉಪಸ್ಥಿತರಿದ್ದರು.