ಕಲಬುರಗಿ, ಮೇ.30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ ಅವರಿಗೆ ಮಂತ್ರಿ ಸ್ಥಾನ ನೀಡಿರುವುದು ಹರ್ಷ ತಂದಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಗುಂಡು ಪಾಟೀಲ್ ತಿಳಿಸಿದ್ದಾರೆ.
ಏಳು ವರ್ಷಗಳ ಬಳಿಕ ಯಾದಗಿರಿ ಜಿಲ್ಲೆಗೆ ಸಚಿವ ಸ್ಥಾನ ನೀಡಿದ್ದು, ಹೀಗಾಗಿ ಶರಣಬಸಪ್ಪ ದರ್ಶನಾಪುರ ಅವರಿಗೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕು. ಆ ಮೂಲಕ ಯಾದಗಿರಿ ಸರ್ವಾಂಗಿಣ ಅಭಿವೃದ್ಧಿಗೆ ಸರಕಾರ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇತ್ತೀಚಿಗೆ ಶರಣಬಸಪ್ಪ ದರ್ಶನಾಪುರ ಮಂತ್ರಿಯಾಗಲೆಂದು ಗುಂಡು ಪಾಟೀಲ್ ನೇತೃತ್ವದಲ್ಲಿ ಸುಪ್ರಸಿದ್ದ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು.