ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.29:
ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಮೇಲೆ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಸೋಮವಾರ ರದ್ದುಗೊಳಿಸಿದೆ.
ಹಾಸನ ಜಿಲ್ಲೆಯ ಹೊಳೆ ನರಸೀಪುರ ಪೊಲೀಸ್ ಠಾಣೆಯಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ. ಮನೆಕೆಲಸದಾಕೆಯಾದ ನನ್ನ ಮೇಲೆ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರು ನೀಡಿದ್ದರು.
ಪೊಲೀಸರು ವಿಳಂಬವಾಗಿ ದೂರು ದಾಖಲಿಸಿದ್ದಾರೆ ಎಂದು ಹೇಳಿದ ಕೋರ್ಟ್ ಪ್ರಕರಣ ರದ್ದುಪಡಿಸಿತು.
ಪ್ರಕರಣದ ಹಿನ್ನೆೆಲೆ :
ಶಾಸಕ ಎಚ್.ಡಿ.ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿಿದ್ದ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಎಚ್.ಡಿ.ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೇ ವೇಳೆ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಮೇಲೂ ದೂರು ದಾಖಲಾಗಿತ್ತು.
ಸಂತ್ರಸ್ತೆೆಯ ದೂರು ಆಧರಿಸಿ ರೇವಣ್ಣ ಅವರನ್ನು ಮೊದಲ ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.
ರೇವಣ್ಣ ಅವರು ತಮ್ಮ ಪತ್ನಿಿ ಭಾವಾನಿ ಅವರು ಮನೆಯಲ್ಲಿ ಇಲ್ಲದ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿಿದ್ದರು. ಅಲ್ಲದೆ ತಮ್ಮ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ಮಾಡುತ್ತಿಿದ್ದರು. ಮಗಳು ಹೆದರಿ ನಂಬರ್ ಬ್ಲಾಾಕ್ ಮಾಡಿಕೊಂಡಿದ್ದಳು. ಬಳಿಕ ನಾನು ಅವರ ಮನೆಯಲ್ಲಿ ಕೆಲಸ ಮಾಡುವುದನ್ನು ಬಿಟ್ಟೆೆ ಎಂದು ಸಂತ್ರಸ್ತೆೆ ದೂರಿನಲ್ಲಿ ಹೇಳಿದ್ದರು.
ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾಗುತ್ತಿಿರುವ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿಿದ್ದು ಅಲ್ಲದೆ ಲೈಂಗಿಕ ದೌರ್ಜನ್ಯಕ್ಕೆೆ ಒಳಗಾದ ಮಹಿಳೆ ನನ್ನೊೊಂದಿಗೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿಿದ್ದರು. ಆಕೆಯೊಂದಿಗೆ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯದ ವಿಡಿಯೋ ನೋಡಿ ಭಯವಾಗಿದ್ದು ತನ್ನ ಗಂಡ ಕೂಡ ತನ್ನ ಶೀಲ ಶಂಕಿಸುತ್ತಿಿದ್ದಾರೆ. ವಿಡಿಯೋ ಬಹಿರಂಗಗೊಂಡರೆ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದ್ದರು. ಇದರಿಂದ ಮಾನಸಿಕ ಹಿಂಸೆ ಆಗಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದರು.
ಅಲ್ಲದೆ ಈ ಕುರಿತು ಪೊಲೀಸರು ದೂರು ನೀಡಿರುವುದರಿಂದ ನನಗೆ ಹಾಗೂ ನನ್ನ ಮಗಳಿಗೆ ಜೀವ ಭಯ ಇದ್ದು ನಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ಪೊಲೀಸರಲ್ಲಿ ಮನವಿ ಮಾಡಿದ್ದರು.

