ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಆ.28 : ಕ್ರೀಡೆಗಳಿಂದ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃಧ್ಧಿಯಾಗುವ ಜೊತಗೆ ಸೌರ್ಹಾದತೆ ಬೆಳೆಯುತ್ತದೆ ಎಂದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ 2023-24 ನೇ ಸಾಲಿನ ತಾಲ್ಲೂಕು ಮಟ್ಟದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ಪಾಠ ಪ್ರವಚನಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿದ್ದರೆ ವಿದ್ಯಾರ್ಥಿಗಳ ಉತ್ಸಾಹ ಇಮ್ಮಡಿಗೊಳ್ಳುತ್ತದೆ. ಪೋಷಕರು ಮಕ್ಕಳ ಮೇಲೆ ಅಪಾರ ನಿರೀಕ್ಷೆಯನ್ನು ಇಟ್ಟುಕೊಂಡಿರುತ್ತಾರೆ. ಮಕ್ಕಳಿಗಾಗಿ ಸಾಕಷ್ಟು ತ್ಯಾಗ ಮಾಡುತ್ತಾರೆ. ವಿದ್ಯಾರ್ಥಿಗಳು ತಾಯಿ-ತಂದೆ ಮತ್ತು ಗುರುವಿಗೆ ಗೌರವ ತರಬೇಕು. ಉನ್ನತ ಸಾಧನೆ ಮಾಡಿ ಊರಿಗೆ ಕೀರ್ತಿ ತರಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸುಬ್ಬಾರೆಡ್ಡಿ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ. ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಬಹಳ ಮುಖ್ಯ. ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ತಾಲ್ಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದವರೆಗೆ ಬೆಳೆಯಬೇಕು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟಶಿವಾರೆಡ್ಡಿ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಮುನಿರೆಡ್ಡಿ, ದೈಹಿಕ ಪರಿವೀಕ್ಷಕ ದೇವೇಂದ್ರಪ್ಪ, ಅಕ್ಷರ ಕಾಲೇಜಿನ ಪ್ರಕಾಶ್, ಎಚ್.ವಿ.ಶಿವಾರೆಡ್ಡಿ, ಡಿ.ದೀಪಕ್, ಎ.ಆರ್.ಎಂ.ಕಾಲೇಜುನ ಮೂರ್ತಿ, ತಾದೂರು ರಘು ಉಪಸ್ಥಿತರಿದ್ದರು.