ಸುದ್ದಿಮೂಲ ವಾರ್ತೆ
ಹೊಸಕೋಟೆ, ಜು 21 : ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಆ.8 ಮತ್ತು 9 ರಂದು ಎರಡು ದಿನಗಳು ಆಯೋಜಿಸಲಾಗಿದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಗದೀಶ್ ಹೇಳಿದರು.
ಹೊಸಕೋಟೆ ತಾಲೂಕಿನ ಸೂಲಿಬೆಲೆ ವಿವೇಕಾನಂದ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಅಧಿಕೃತ ಸುತ್ತೋಲೆಯಂತೆ ತಾಲೂಕಿನ ಎಲ್ಲಾ ಹೋಬಳಿಗಳ ಕ್ರೀಡಾಕೂಟ ನೆಡೆಸಲು ಆಯ ಹೋಬಳಿ ಮಟ್ಟದಲ್ಲಿ ಪೂರ್ವಭಾವಿಸಭೆ ಆಯೋಜಿಸಿ ರೂಪ ರೇಷೆಗಳನ್ನು ತಯಾರು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತಲುಪಿಸಿ ಅನುಮೋದಿಸಿಕೊಳ್ಳಬೇಕು ಎಂದರು .
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಶ್ರೀನಿವಾಸ್ ಮಾತನಾಡಿ, ಎಲ್ಲ ಶಾಲೆಗಳ ಶಿಕ್ಷಕರು ಕ್ರೀಡಾಕೂಟಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಬೇಕು ಎಂದರು.