ಸುದ್ದಿಮೂಲ ವಾರ್ತೆ ಬೆಂಗಳೂರು, ಜ.06:
ಬಳ್ಳಾರಿ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಿಯ ಮರಣೋತ್ತರ ಪರೀಕ್ಷೆಯನ್ನು ಎರಡು ಸಲ ನಡೆಸಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ವ್ಯಕ್ತಿಿಯ ಮರಣೋತ್ತರ ಪರೀಕ್ಷೆಯನ್ನು ಎರಡು ಸಲ ನಡೆಸಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇನ್ನು ಯಾರ ಮಾತನ್ನು ನಂಬಬೇಕು. ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದಿರುವ ವೈದ್ಯರ ಮಾತನ್ನು ನಾನು ಕೂಡ ಒಪ್ಪುುತ್ತೇನೆ ಎಂದರು.
ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬುದಾಗಿ ಹೇಳಿಕೆ ನೀಡಿರುವ ನಾಯಕರುಗಳು ನೋಡಿದ್ದಾರೆಯೇ? ಯಾವುದೇ ವಿಚಾರವಾಗಲಿ ತಿಳಿದುಕೊಂಡು ಮಾತನಾಡಬೇಕು. ಇಲ್ಲವಾದರೆ ಬೇರೆ ರೀತಿಯ ಪರಿಣಾಮ ಆಗುತ್ತದೆ. ನನ್ನನ್ನು ಸೇರಿದಂತೆ ರಾಜಕೀಯ ನಾಯಕರುಗಳು ಮಾತನಾಡುವಾಗ ಹೇಳಿಕೆಗಳು ಸಮಾಜದಲ್ಲಿ ಏನಾಗಬಹುದು ಎಂಬುದನ್ನು ಅರಿತುಕೊಂಡು ಮಾತನಾಡಬೇಕು ಎಂದರು.
ಹೆಚ್.ಡಿ.ಕುಮಾರಸ್ವಾಾಮಿ ಅವರು ಕೇಂದ್ರದ ಸಚಿವರಿದ್ದಾರೆ. ಇಡೀ ರಾಷ್ಟ್ರದ ಮಾಹಿತಿ ಅವರ ಬಳಿ ಇದೆ. ಯಾವ ರಾಜ್ಯದಲ್ಲಿ ಏನೇನು ಅಗುತ್ತಿಿದೆ ಎಂಬುದು ಅವರಿಗೆ ಗೊತ್ತಿಿದೆ. ಒಂದು ಘಟನೆಯನ್ನು ಆಧರಿಸಿ ವ್ಯವಸ್ಥೆೆಯನ್ನು ಅಳತೆ ಮಾಡಲು, ಸರ್ಟಿಫಿಕೇಟ್ ಕೊಡಲು ಆಗುವುದಿಲ್ಲ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆೆಯನ್ನು ಕಾಪಾಡುವ ಕೆಲಸವನ್ನು ಪೊಲೀಸ್ ಇಲಾಖೆಯು ಅವರ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾಾರೆ. ಇಂತಹ ಘಟನೆಗಳಾದ ಸಂದರ್ಭದಲ್ಲಿ ಸರ್ಕಾರ ಕೆಲವು ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡುತ್ತದೆ ಎಂದರು.
ಸಿಎಂಗೆ ಅಭಿನಂದನೆ:
ಮಾಜಿ ಮುಖ್ಯಮಂತ್ರಿಿ ದಿವಂಗತ ಡಿ.ದೇವರಾಜು ಅರಸು ಅವರ 2792 ದಿನಗಳನ್ನು ಸರಿಗಟ್ಟಿಿರುವ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದರು.

