ಸುದ್ದಿಮೂಲ ವಾರ್ತೆ
ಆನೇಕಲ್, ನ. 07 : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಎಲೆಕ್ಟ್ರಾನಿಕ್ ಸಿಟಿ ಇಂಟರ್ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ ಕಾಲೇಜಿನಲ್ಲಿ 25ನೇ ವರ್ಷದ ರಜತ ಮಹೋತ್ಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ಫೋಸಿಸ್ ನಾರಾಯಣ ಮೂರ್ತಿ ಮಾತನಾಡಿ, ಶೈಕ್ಷಣಿಕ ಉತ್ಕೃಷ್ಟತೆಯನ್ನು ಆಚರಿಸುವ ಮೂಲಕ ಮಹತ್ವದ ಮೈಲುಗಲ್ಲನ್ನು ಸಾಧಿಸಿದೆ. ಶಿಕ್ಷಣ ಮತ್ತು ಸಂಶೋಧನೆ, ಉದ್ಯಮಶೀಲತೆ ಮತ್ತು ನಾವೀನ್ಯತೆಯ ಮೂಲಕ ಐಟಿ ಉದ್ಯಮಕ್ಕೆ ಕೊಡುಗೆ ನೀಡುವ ದೃಷ್ಟಿಯಿಂದ 1998ರಲ್ಲಿ ಸ್ಥಾಪನೆಯಾದ ಐಐಐಟಿ ಬೆಂಗಳೂರು ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ವಿಶಿಷ್ಟ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟರು.
ಐಐಐಟಿ-ಬೆಂಗಳೂರು ನಿರ್ದೇಶಕ ಪ್ರೊ.ದೇಬಬ್ರತ ದಾಸ್ ಮಾತಾನಾಡಿ, ಶೈಕ್ಷಣಿಕ ಉತ್ಕೃಷ್ಟತೆಯಿಂದ ಇಪ್ಪತ್ತೈದು ವರ್ಷಗಳ ಸಮರ್ಪಿತ ಶೈಕ್ಷಣಿಕ ಸೇವೆ ಐಐಐಟಿ ಯನ್ನು ಪ್ರತ್ಯೇಕ ವಿಶೇಷ ಸ್ಥಾನದಲ್ಲಿ ನಿಲ್ಲುವಂತೆ ಮಾಡಿದೆ. ಅಲ್ಲದೆ, ಮಾಹಿತಿ ತಂತ್ರಜ್ಞಾನದ ಕ್ರಿಯಾತ್ಮಕ ಜಗತ್ತಿನಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ, ಮಹಾಸಭೆ ಸದಸ್ಯರು, ಕ್ರಿಸ್ ಗೋಪಾಲ ಕೃಷ್ಣನ್, ಆಡಳಿತ ಮಂಡಳಿ ಸದಸ್ಯರಾದ ಬಿ ವಿ ನಾಯ್ಡು, ಪ್ರೊ. ಎಂ ರಾಮ್ ಮೋಹನ್ ರಾವ್, ಸಾಮಾನ್ಯ ಸಭೆಯ ಸದಸ್ಯರು, ಎನ್ ವಿಶ್ವನಾಥನ್, ಪ್ರೊ.ಎಸ್.ಸಡಗೋಪನ್ ಭಾಗಿಯಾಗಿದ್ದರು,