ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.25:
ರಾಜ್ಯದಲ್ಲಿ ತಾಂಡ, ಹಟ್ಟಿಿ ಗೊಲ್ಲರಹಟ್ಟಿಿ ಗಳಲ್ಲಿ ವಾಸ ಮಾಡುತ್ತಿಿದ್ದ ನಿವಾಸಿಗಳಿಗೆ ಕಂದಾಯ ಇಲಾಖೆ ಜಾರಿಗೊಳಿಸಿರುವ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಿಯೆ ಕೂಡಲೇ ಪೂರ್ಣಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಸಚಿವರು ನಡೆಸಿದ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿ 1 ಲಕ್ಷ 10 ಸಾವಿರ ಹಕ್ಕುಪತ್ರಗಳನ್ನು ವಿತರಿಸಿ ಯೋಜನೆ ಪೂರ್ಣಗೊಳಿಸಬೇಕು ಎಂದರು.
ದಾಖಲೆ ರಹಿತ ವಸತಿ ಪ್ರದೇಶ ಮತ್ತು ಮನೆಗಳನ್ನು ಗುರುತಿಸಿ ಸರ್ವೇ ಮಾಡಿ, ದಾಖಲೆಗಳನ್ನು ತಯಾರಿಸಿ, ಅಧಿಸೂಚನೆ ಹೊರಡಿಸಿ, ಹಕ್ಕುಪತ್ರ ನೀಡಿ, ಕ್ರಯಪತ್ರದಂತೆ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆೆಯಲ್ಲಿ ಪಕ್ಕಾಾ ಖಾತೆ ಮಾಡುವುದರ ಮುಖಾಂತರ ಸಂಪೂರ್ಣ ಮಾಲಿಕತ್ವದ ಗ್ಯಾಾರಂಟಿ ನೀಡುವ ಈ ಕಾರ್ಯ ರಾಜ್ಯಾಾದ್ಯಂತ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿಿದೆ. ಬಹುತೇಕ ಬಡ ಕುಟುಂಬಗಳೇ ಇದರ ಲಾನುಭವಿಗಳಾಗಿದ್ದಾರೆ. ಯಾರಿಂದಲೂ ಅರ್ಜಿಗೆ ಕಾಯದೆ, ಕಂದಾಯ ಇಲಾಖೆಯ ಅಧಿಕಾರಿಗಳೇ ಸ್ವತಃ ಜನರ ಮನೆ ಬಾಗಿಲಿಗೆ ಹೋಗಿ ಇಷ್ಟೂ ಕೆಲಸ ಮಾಡಿಕೊಡುತ್ತಿಿದ್ದಾರೆ. ಇದರಲ್ಲಿ ಆಗಿರುವ ಪ್ರಗತಿ ಒಳಗೊಂಡರೆ ಒಟ್ಟು 4 ಲಕ್ಷ ಕುಟುಂಬಗಳಿಗೆ ಶಾಶ್ವತ ನೆಮ್ಮದಿ ನೀಡಿದಂತಾಗುತ್ತದೆ. ಹೀಗಾಗಿ ಜಿಲ್ಲಾಧಿಕಾರಿಗಳು ಶ್ರಮ ವಹಿಸಬೇಕು ಎಂದರು.
ಭೂ ಪರಿವರ್ತನೆ ಕಾಯ್ದೆೆಗೆ ತಿದ್ದುಪಡಿ ತಂದು ಸರಳೀಕರಣ:
ನಮ್ಮ ಸರ್ಕಾರ ಭೂ ಪರಿವರ್ತನೆ ಕಾಯ್ದೆೆಗೆ ಹಲವು ತಿದ್ದುಪಡಿ ತಂದು ಸರಳಗೊಳಿಸಿದೆ. ಇದರ ಲಾಭ ಜನರಿಗೆ ಸಿಗಬೇಕು. ಭೂ ಪರಿವರ್ತನೆಗಳಿಗೆ ಸಂಬಂಧಿಸಿದಂತೆ ಹಲವು ತಿದ್ದುಪಡಿ ತರಲಾಗಿದೆ. ಮಾಸ್ಟರ್ ಪ್ಲಾಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದುಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ ನಕ್ಷೆ ಅನುಮೋದನೆಗೆ ಹೋಗಬಹುದು. ‘ಮಾಸ್ಟರ್ ಪ್ಲಾಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ ಸಹ ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ಆಗುತ್ತಿಿತ್ತು. ಆದರೆ, ಪ್ರಸ್ತುತ 30 ದಿನಗಳಲ್ಲಿ ಭೂಪರಿವರ್ತನೆ ಕಡ್ಡಾಾಯಗೊಳಿಸಲಾಗಿದೆ. ‘ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ‘ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. ‘30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ ಎಂಬ ನಿಯಮ ಜಾರಿಗೊಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಬಾಕ್ಸ್
ಅಡಳಿತದಲ್ಲಿ ಸರಳೀಕರಣ
‘ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ. ‘ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ. ‘ಭೂ ಪರಿವರ್ತನೆಗೆ ಸಂಬಂಧಿಸಿದ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ ಎಂದು ‘ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ನ್ಯಾಾಯಾಲಯಗಳನ್ನು ಆನ್ಲೈನ್ ಮುಖಾಂತರ ನಡೆಸಲು ಕಾನೂನು ತರಲಾಗಿದೆ. ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದಲಿಗೆ ಅವರು ಆನ್ಲೈನ್ ಮುಖಾಂತರವೇ ನ್ಯಾಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ. ‘ಅದೇ ರೀತಿ ಭೂ ಸುರಕ್ಷಾ ಮೋಜಣಿಗೆ ಈಗ ಕಾನೂನಿನ ಬಲ ಒದಗಿಸಲಾಗಿದ್ದು, ನಿಯಮಗಳಲ್ಲಿ ಅವಕಾಶ ನೀಡಲಾಗಿದೆ. ಆಡಳಿತದಲ್ಲಿ ಸರಳೀಕರಣ ಪಾರದರ್ಶಕತೆ ಜಾರಿಗೊಳಿಸುವ ಮುಖಾಂತರ ಆಡಳಿತದಲ್ಲಿ ಗಣನೀಯ ಸುಧಾರಣೆ ತರುವುದು ನಮ್ಮ ಮೂಲ ಉದ್ದೇಶವಾಗಿದೆ. ಈ ಬಗ್ಗೆೆ ನಾಗರಿಕರಿಗೆ ಮಾಹಿತಿ ನೀಡಬೇಕು ಎಂದರು.

