ಸುದ್ದಿಮೂಲ ವಾರ್ತೆ ಕಲಬುರಗಿ, ಸೆ.28:
ಅತಿವೃಷ್ಟಿಿ ಹಾಗೂ ಪ್ರವಾಹದಂತಹ ಆಕಸ್ಮಿಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ 2025ರ ಆಗಸ್ಟ್ ತಿಂಗಳಲ್ಲಿ ಶೇ.69 ರಷ್ಟು ಹಾಗೂ ಸೆಪ್ಟೆೆಂಬರ್ ತಿಂಗಳ ಮೊದಲ 28 ದಿನಗಳಲ್ಲಿ ಶೇ.72ರಷ್ಟು ವಾಡಿಕೆಗಿಂತಲೂ ಹೆಚ್ಚಿಿನ ಮಳೆಯಾಗಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದ ಆಗಿರುವ ಪರಿಣಾಮಗಳು ಹಾಗೂ ಅವುಗಳನ್ನು ಸಮರ್ಪಕವಾಗಿ ಎದುರಿಸುವ ಸಂಬಂಧ ಕಲುಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಲವು ಸೂಚನೆಗಳು ನೀಡಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡು, ಪ್ರವಾಹ ಪೀಡಿತ ಸ್ಥಳಗಳನ್ನು ಖುದ್ದಾಗಿ ವೀಕ್ಷಿಸಲಾಗಿದೆ. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಶಾಲೆಗಳು ಹಾಗೂ ಇತರೆ ಕಟ್ಟಡಗಳ ಗೋಡೆಗಳು ಕುಸಿಯುವ ಸಾಧ್ಯತೆ ಇರುವದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುತ್ತದೆ. ಆದ್ದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆೆಚ್ಚರಿಕೆಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾಾನದಲ್ಲಿದ್ದು ಪ್ರವಾಹ, ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು.
ಜಲಾಶಯದಿಂದ ನೀರು ಬಿಡುವ ಬಗ್ಗೆೆ ಮಾಹಿತಿ ಬಂದ ಕೂಡಲೇ ನದಿ ಪಾತ್ರದಲ್ಲಿರುವ ಗ್ರಾಾಮಗಳ ಸಾರ್ವಜನಿಕರಿಗೆ ಮುಂಚಿತವಾಗಿ ತಿಳುವಳಿಕೆ ನೀಡಲು ಡಂಗುರದ ಮೂಲಕ ಪ್ರಚಾರ ಮಾಡಲು ಮತ್ತು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಪ್ರವಾಹದಿಂದ ಹಾನಿಯಾದ ಬಗ್ಗೆೆ ಪ್ರಾಾಥಮಿಕ ವರದಿಯನ್ನು ಅಧಿಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆೆ ಸಲ್ಲಿಸಬೇಕು ಹಾಗೂ ತುರ್ತು ಪರಿಹಾರ ನೀಡಲು ನಿಯಮಾನುಸಾರ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಬೆಳೆವಿಮೆ:
2025ರ ಮುಂಗಾರು ಹಂಗಾಮಿನಲ್ಲಿ 3.01 ಲಕ್ಷ ರೈತ ಬಾಂಧವರು ನೊಂದಣಿ ಮಾಡಿಸಿದ್ದು ಅತಿವೃಷ್ಟಿಿಯಿಂದ ಬೆಳೆ ಹಾನಿಯಾಗಿರುವ ಕಾರಣಕ್ಕೆೆ ಇಲ್ಲಿಯವರೆಗೆ 1.78 ಲಕ್ಷ ರೈತ ಬಾಂದವರು ಸ್ಥಳೀಯ ವಿಪತ್ತು ಅಡಿಯಲ್ಲಿ ಶೇ.59ರಷ್ಟು ರೈತ ಬಾಂಧವರು ದೂರು ಸಲ್ಲಿಸಿರುವ ಪ್ರಯುಕ್ತ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಹಾನಿ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಕೆಲವೆ ದಿವಸಗಳಲ್ಲಿ ಬೆಳೆ ಹಾನಿಯಾದ ರೈತ ಬಾಂಧವರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಪ್ರಿಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನದಿಗಳಿಂದ ಅಧಿಕ ನೀರು ಹೊರಕ್ಕೆೆ:
ಮಹಾರಾಷ್ಟ್ರ ರಾಜ್ಯದ ಉಜ್ಜನಿ ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ 1.84 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿಿದೆ. ಈ ನೀರು ಅಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾಾರೇಜಿಗೆ ರವಿವಾರ ಬಂದು ತಲುಪುತ್ತದೆ.
ಈಗಾಗಲೇ ಸೊನ್ನ ಬ್ಯಾಾರೇಜ್ನಿಂದ 2.80 ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿಿದೆ, ಉಜ್ಜನಿ ಮತ್ತು ಸಿನಾ ಜಲಾಶಯದ ನೀರು ಬಂದ ನಂತರ ಸೊನ್ನ ಬ್ಯಾಾರೇಜಿನಿಂದ ಇನ್ನೂ ಹೆಚ್ಚಿಿನ ಗೇಟ್ಗಳ ಮೂಲಕ ಭೀಮಾ ನದಿಗೆ ನೀರು ಹರಿಬಿಡಲಾಗುವುದು ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ಬೆಣ್ಣೆೆತ್ತೋೋರ ಜಲಾಶಯದಿಂದ 12000 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿಿದೆ. ಮಳೆಯ ಮುನ್ಸೂಚನೆ ಇರುವ ಕಾರಣ ಜಲಾಶಯದ ಒಳಹರಿವು ಹೆಚ್ಚಾಾಗುವ ಸಾಧ್ಯತೆ ಯಾವುದೇ ಸಮಯದಲ್ಲಿ ಜಲಾಶಯದಿಂದ ಇನ್ನು ಹೆಚ್ಚಿಿನ ನೀರು ನದಿಗೆ ಹರಿಸಲಾಗುವುದು. ಆದ್ದರಿಂದ ಮುಂದಿನ ದಿನಗಳಲ್ಲಿ ಸೊನ್ನ ಮತ್ತು ಬೆಣ್ಣತೋರ ಬ್ಯಾಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಮುಂಜಾಗರೂಕತೆ ವಹಿಸಲು ಸೂಚಿಸುವಂತೆ ಜಿಲ್ಲೆ, ತಾಲೂಕು, ಹೋಬಳಿ, ಹಾಗೂ ಗ್ರಾಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.
ಮಳೆಯಿಂದ ಮೃತರಾದವರ ಕುಟುಂಬಗಳ ಅವಲಂಬಿತರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಆಗಬೇಕು, ಆಸ್ಪತ್ರೆೆಗಳಲ್ಲಿ ಅವಶ್ಯ ಔಷಧಿಗಳಳು, ಒ.ಆರ್.ಎಸ್. ಸ್ಟ್ಎಯ್ಡ್ ಸಾಮಗ್ರಿಿಗಳನ್ನು ದಾಸ್ತಾಾನು ಇರಿಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮನೆ ಕಳೆದುಕೊಂಡಿರುವ ನಿರಾಶ್ರಿತರನ್ನು ಆಯಾ ಗ್ರಾಾಮಗಳ ಪರಿಮಿತಿಯೊಳಗಿನ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಬೇಕು, ಅಪಾಯದ ಸ್ಥಿಿತಿಯಲ್ಲಿರುವ ಕಟ್ಟಡಗಳಲ್ಲಿ ವಾಸ ಮಾಡುವವರನ್ನು ಸಹ ಕಾಳಜಿ ಕೇಂದ್ರಗಳಲ್ಲಿರಿಸಬೇಕು, ಬಿ.ಇ.ಒಗಳು ತೊಂದರೆಗೀಡಾದ ಗ್ರಾಾಮಗಳಿಗೆ ಭೇಟಿ ನೀಡಿ, ಕಟ್ಟಡಗಳು ಶಿಥಿಲವಾಗಿಲ್ಲ ಎಂಬುದನ್ನು ಖಾತ್ರಿಿಪಡಿಸಿಕೊಳ್ಳಬೇಕು, ಹೊಳೆ ಹರಿಯುವ ಹಾಗೂ ನೀರು ನಿಂತ ಸ್ಥಳಗಳತ್ತ ಮಕ್ಕಳನ್ನು ಕಳುಹಿಸದಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು, ಪ್ರವಾಹಕ್ಕೆೆ ತುತ್ತಾಾಗಿರುವ ನದಿ ಹಾಗೂ ಹೊಳೆಯತ್ತ ಹೋಗದಂತೆ ಗ್ರಾಾಮಸ್ಥರು ಜಾಗ್ರತೆವಹಿಸಬೇಕು ಎಂದೂ ಸಚಿವ ಪ್ರಿಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
88 ಗ್ರಾಾಮಗಳು ಪ್ರವಾಹ ಪೀಡಿತ:
ಈಗಾಲೇ ಕಲಬುರಗಿ ಜಿಲ್ಲೆಯ ಭಾರಿ ಮಳೆಯಿಂದಾಗಿ ಒಟ್ಟು 88 ಗ್ರಾಾಮ ಗಳನ್ನು ಪ್ರವಾಹ ಪೀಡಿತ ಗ್ರಾಾಮಗಳೆಂದು ಗುರುತಿಸಲಾಗಿದ್ದು, ಒಟ್ಟು 54 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಹಾಗೂ ಸದರಿ ಕಾಳಜಿ ಕೇಂದ್ರಗಳಿಗೆ ಒಟ್ಟು 6664 ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಹಾಗೂ ರಕ್ಷಣಾ ಸಿಬ್ಬಂದಿಗಳಿಂದ ಕಾಳಜಿ ಕೇಂದ್ರಕ್ಕೆೆ ಸ್ಥಳಾಂತರಿಸಿಲಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿಗೆ ಶೀಘ್ರದಲ್ಲೇ ಸಿಎಂ ಭೇಟಿ:
ಕಲಬುರಗಿ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದ ಮಾಹಿತಿಯನ್ನು ಮುಖ್ಯಮಂತ್ರಿಿಗಳ ಗಮನಕ್ಕೆೆ ತಂದಿದ್ದು ಸದರಿ ಪ್ರವಾಹ ಪಿಡಿತ ಗ್ರಾಾಮಗಳಿಗೆ ಅಗತ್ಯ ತುರ್ತು ಕ್ರಮ ಕೈಕೊಳ್ಳಲು ತಿಳಿಸಲಾಗಿದ್ದು ಹಾಗೂ ಅತಿ ಶೀಘ್ರದಲ್ಲಿ ಮುಖ್ಯಮಂತ್ರಿಿಗಳು ಕಲಬುರಗಿ ಜಿಲ್ಲೆಗೆ ಭೇಟಿ ನಿಡಲಿದ್ದಾರೆಂದು ಸಚಿವ ಪ್ರಿಿಯಾಂಕ್ ಖರ್ಗೆ ತಿಳಿಸಿದ್ದಾರೆ.