ನವದೆಹಲಿ, ನ.12: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟವನ್ನು ‘ಭಯೋತ್ಪಾದಕ ಕೃತ್ಯ’ ಎಂದು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಅಂಗೀಕರಿಸಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಭೂತಾನ್ ಪ್ರವಾಸದಿಂದ ಮರಳಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಸ್ಫೋಟದಿಂದ ಗಾಯಾಳುಗಳಾದವರ ಆರೋಗ್ಯ ವಿಚಾರಿಸಿದರು. ಬಳಿಕ ಅವರ ನಿವಾಸದಲ್ಲಿಯೇ ಬೆಳಗ್ಗೆ ಭದ್ರತಾ ಸಂಪುಟ ಸಮಿತಿ (ಸಿಸಿಎಸ್) ಮತ್ತು ಸಂಜೆ ಸಚಿವ ಸಂಪುಟ ಸಭೆ ನಡೆಸಿ ಕೆಂಪುಕೋಟೆ ಬಳಿಕ ಸ್ಫೋಟವನ್ನು ತೀವ್ರವಾಗಿ ಖಂಡಿಸಿ ನಿರ್ಣಯ ತೆಗೆದುಕೊಳ್ಳಲಾಯಿತು.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ದೆಹಲಿಯ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಇದೊಂದು ಉಗ್ರರ ಹೇಯ ಕೃತ್ಯವೆಂದು ಎಂದು ಖಂಡನಾ ನಿರ್ಣಯ ತೆಗೆದುಕೊಳ್ಳಲಾಗಿದೆ. ಹೇಡಿತನದ ಭಯೋತ್ಪದನಾ ಕೃತ್ಯಗಳಿಗೆ ಭಾರತ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಹೇಳಿದರು.
ನವೆಂಬರ್ 10 ರಂದು ನಡೆದ ದೆಹಲಿ ಭಯೋತ್ಪಾದಕ ಘಟನೆಯನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯವನ್ನು ಅಂಗೀಕರಿಸಿತು ಮತ್ತು ಸ್ಫೋಟದಲ್ಲಿ ಜೀವ ಕಳೆದುಕೊಂಡವರಿಗೆ ಬಲಿಪಶುಗಳಿಗೆ ಗೌರವ ಸಲ್ಲಿಸಲಾಯಿತು ಎಂದು ಅಶ್ವಿನಿ ವೈಷ್ಣವ್ ಹೇಳಿದರು.
ದೇಶವಿರೋಧಿ ಶಕ್ತಿಗಳು ದೇಶದಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ನ.10ರಂದು ಕಾರು ಸ್ಫೋಟಿಸುವ ಮೂಲಕ ಇಂತಹ ಹೀನ ಕೃತ್ಯ ಎಸಗಿದ್ದಾರೆ. ನಮ್ಮ ಭದ್ರತಾ ಸಿಬ್ಬಂದಿ ಮುಂದೆ ಸಂಭವಿಸಬಹುದಾದ ಭಾರಿ ಅನಾಹುತವನ್ನು ತಡೆಗಟ್ಟಿದ್ದರೂ ಸಹ ಆಗಿರುವ ಅನಾಹುತವನ್ನು ಅತ್ಯಂತ ವೃತ್ತಿಪರದಿಂದ ನಿಭಾಯಿಸಬೇಕು ಎಂದು ಸೂಚಿಸಲಾಗಿದೆ. ಅಪರಾಧಿಗಳು ಮತ್ತು ಅವರಿಗೆ ಬೆಂಬಲ ನೀಡಿದವರನ್ನು ಯಾವುದೇ ವಿಳಂಬ ಮಾಡದೆ ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ದೆಹಲಿಯಲ್ಲಿ ನಡೆದ ಈ ದಾರುಣ ಘಟನೆ ನನ್ನಲ್ಲಿ ತೀವ್ರ ದುಃಖ ಉಂಟುಮಾಡಿದೆ. ಪ್ರಾಣ ಕಳೆದುಕೊಂಡ ಕುಟುಂಬಗಳ ನೋವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಇಡೀ ದೇಶವೇ ಈ ದುಃಖದ ಸಮಯದಲ್ಲಿ ಪೀಡಿತ ಕುಟುಂಬಗಳೊಂದಿಗೆ ನಿಂತಿದೆ. ನಮ್ಮ ತನಿಖಾ ಸಂಸ್ಥೆಗಳು ಈ ಸಂಚಿನ ಮೂಲವರೆಗೂ ಹೋಗಿ ತನಿಖೆ ಮಾಡಲಿವೆ. ತಪ್ಪಿತಸ್ಥರು ಯಾವುದೇ ಕರಣಕ್ಕೂ ಶಿಕ್ಷಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.
-ನರೇಂದ್ರ ಮೋದಿ, ಪ್ರಧಾನಿ (ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಹೇಳಿಕೆ)
————–

