ಸುದ್ದಿಮೂಲವಾರ್ತೆ
ಕೊಪ್ಪಳ ಆ 19: ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ವ್ಯತ್ಯಯವಾದ ಹಿನ್ನೆಲೆ ಆಕ್ರೋಶಗೊಂಡ ರೈತರಂದ ಜೆಸ್ಕಾಂ 110 ಕೆವಿ ಸ್ಟೇಷನ್ ಮುಂದೆ ಪ್ರತಿಭಟನೆ ಮಾಡಿದರು.
ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದಲ್ಲಿರುವ ಜೆಸ್ಕಾಂ 110 ಕೆವಿ ಸ್ಟೇಷನ್ ಬಂದ್ ಮಾಡಿ. ಎಲ್ಲ ಫೀಡರ್ ಬಂದ್ ಮಾಡಿದ್ದರು.ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಹಲವು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಜೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಹೋರಾಟದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕೊಪ್ಪಳ ಜೆಸ್ಕಾಂ ಎಇಇ ಸಲೀಂ ಪಾಷಾ ತಕ್ಷಣ ಹೆಚ್ಚುವರಿ ಇಬ್ಬರು ಲೈನ್ಮನ್ ಗಳನ್ನು ನಿಯೋಜನೆ. ರೈತರ ಪಂಪುಸೆಟ್ಟುಗಳಿಗೆ 5 ರಿಂದ 12 ಗಂಟೆಯವರೆಗೂ ವಿದ್ಯುತ್ ನೀಡುವ ಹಾಗು ಗುಣಮಟ್ಟದ ವಿದ್ಯುತ್ ನೀಡುವ ಭರವಸೆ ನೀಡಿದರು.
ಅಧಿಕಾರಿಯ ಭರವಸೆಯ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಹಿಂಪಡೆದರು.