ಗಮನಿಸಿ ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಉಪನ್ಯಾಸಕನ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಪಭಟನೆ ನಡೆಸಿ ಖಂಡಿಸಿದರು.
ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕನ ವಿರುದ್ಧ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದು ಕಾಲೇಜಿನ ವತಿಯಿಂದ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬ ವಿಚಾರಕ್ಕೆ ಪ್ರತಿಭಟನೆ ಮಾಡಿದರು.
ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ವಿದ್ಯಾರ್ಥಿನಿಯೊಂದಿಗೆ ಮೊಬೈಲ್ ಚಾಟಿಂಗ್ ಹಾಗೂ ಕಾರಿನಲ್ಲಿ ಸುತ್ತಾಟ ನಡೆಸಿದ್ದು ಫೋಟೋ ವಿಡಿಯೋಗಳು ವೈರಲ್ ಆಗಿವೆ. ಅಲ್ಲದೆ ಕಾಲೇಜಿನ ಇತರ ವಿದ್ಯಾರ್ಥಿನಿಯರಿಗೂ ಕೂಡ ವಾಟ್ಸಪ್ ನಲ್ಲಿ ಮೆಸೇಜ್ ಮಾಡುತ್ತಿದ್ದ ಬಗ್ಗೆ ಮೌಖಿಕವಾಗಿ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಆದರೂ ಸಹ ಕಾಲೇಜಿನ ಪ್ರಾಂಶುಪಾಲರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡು ಪ್ರತಿಭಟನೆಗೆ ಮುಂದಾದರು.
ಇಂದು ಕಾಲೇಜಿಗೆ ಬಂದಿದ್ದ ಉಪನ್ಯಾಸಕನನ್ನು ಕೊಠಡಿಯಲ್ಲಿ ಕೂಡಿಹಾಕಿ ಸುಮಾರು 1500 ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಯಿತು. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಪನ್ಯಾಸಕ ಬಂಧನ:
ನಮ್ಮ ಮುಂದೆಯೇ ಉಪನ್ಯಾಸಕನ್ನ ಅರೆಸ್ಟ್ ಮಾಡಬೇಕೆಂದು ಪಟ್ಟು ಹಿಡಿದಿದ್ದ ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ನಗರ ಠಾಣೆಯ ಪೊಲೀಸರನ್ನು ಕರೆಸಿ ಉಪನ್ಯಾಸಕನನ್ನು ಪೊಲೀಸರೊಂದಿಗೆ ಕಳಿಸಲಾಯಿತು.
ಗಲಾಟೆಯ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಜರಿದ್ದು ನೊಂದ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಿಸಿಕೊಡಲು ಹೋರಾಟವನ್ನು ಮಾಡಲಾಯಿತು. ಗಲಾಟೆಯು ತೀರ್ವಸ್ವರೂಪವನ್ನು ಪಡೆದುಕೊಳ್ಳುವುದನ್ನು ತಪ್ಪಿಸಲು ನಗರ ವೃತ ನಿರೀಕ್ಷಕರಾದ ಸಿದ್ದರಾಮೇಶ್ವರ ನೇತೃತ್ವದಲ್ಲಿ ಉಪನ್ಯಾಸಕ
ರಂಗನಾಥನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು.
ಕಾಲೇಜಿನ ಪ್ರಾಂಶುಪಾಲರಾದ ಕುಮಾರಸ್ವಾಮಿ ಮಾತನಾಡಿ, ಈ ಘಟನೆಗೆ ಸಂಬಂಧಿಸಿದಂತೆ ಮೇಲಾಧಿಕಾರಿಗಳಿಗೆ ವಿವರಣೆಯನ್ನು ಕೊಟ್ಟು ತದನಂತರ ಅವರ ಆದೇಶದಂತೆ ನಾನು ಪಾಲನೆ ಮಾಡುತ್ತೇನೆ ಎಂದು ಪತ್ರಕರ್ತರೊಂದಿಗೆ ಮಾತನಾಡಿದರು.