ಸುದ್ದಿಮೂಲ ವಾರ್ತೆ ಮಸ್ಕಿ, ಡಿ.18:
ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ನಿರ್ವಹಿಸಿ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಪುರಸಭೆ ನೂತನ ಅಧ್ಯಕ್ಷ ಸುರೇಶ ಜಿ. ಹರಸೂರು ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಈ ವೇಳೆ ನೂತನ ಅಧ್ಯಕ್ಷ ಸುರೇಶ ಜಿ. ಹರಸೂರು,ಅಧಿಕಾರ ಸ್ವೀಕಾರದ ನಂತರ ಮಾತನಾಡಿದ ಅವರು, ಪುರಸಭೆ ವ್ಯಾಾಪ್ತಿಿಯ ಎಲ್ಲಾಾ 23ವಾರ್ಡ್ಗಳ ಸಮಗ್ರ ಅಭಿವೃದ್ಧಿಿಗೆ ಶ್ರಮಿಸಲಾಗುವುದು. ಮಹಿಳೆಯರಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಸಿಸಿ ರಸ್ತೆೆ, ಚರಂಡಿ, ಬೀದಿದೀಪ ಸೇರಿದಂತೆ ಮೂಲಸೌಕರ್ಯ ಕಲ್ಪಿಿಸಲು ಹೆಚ್ಚಿಿನ ಒತ್ತು ನೀಡಲಾಗುವುದು. ಶೀಘ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪಟ್ಟಣದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿಿ ಕಾಮಗಾರಿಗಳ ಬಗ್ಗೆೆ ಚರ್ಚಿಸಲಾಗುವುದು. ಪಟ್ಟಣದ 23ವಾರ್ಡ್ಗಳಿಗೂ ತಾರತಮ್ಯವಿಲ್ಲದೇ ಸಮಾನವಾಗಿ ಅನುದಾನ ಹಂಚಲಾಗುತ್ತದೆ. ಇದಕ್ಕೆೆ ಎಲ್ಲಾಾ ಸದಸ್ಯರು ಪಕ್ಷಭೇದ ಮರೆತು ಸಹಕಾರ ನೀಡಬೇಕು’ ಎಂದರು.
ಊರಿನ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೋಲಿಸ್ ಪಾಟೀಲ್, ಅಪ್ಪಾಾಜಿಗೌಡ ಪಾಟೀಲ, ಶರಣುಬಸವ ಸೊಪ್ಪಿಿಮಠ, ಪುರಸಭೆ ಮುಖ್ಯ ಅಧಿಕಾರಿ ನರಸರೆಡ್ಡಿಿ, ಡಾ.ದಿವಟರ್ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಗೀತಮ್ಮ ಸ್ಥಾಾಯಿ ಸಮಿತಿ ಅಧ್ಯಕ್ಷ ಚೇತನ್ ಪಾಟೀಲ್ ಸೇರಿದಂತೆ ಪುರಸಭೆ ಸದಸ್ಯರು, ಪುರಸಭೆ ಸಿಬ್ಬಂದಿ ವರ್ಗದವರು ಮತ್ತು ಪಟ್ಟಣ ಹಾಗೂ ಅನೇಕ ಗ್ರಾಾಮಗಳ ಸಾರ್ವಜನಿಕರು ಉಪಸ್ಥಿಿತರಿದ್ದರು.
ಮಸ್ಕಿ ಪುರಸಭೆ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ

