ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಮಾ.27: ತಾಲ್ಲೂಕಿನ ಕಸಬಾ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಮೃತ ಗ್ರಾಮ ಪಂಚಾಯತಿ ಕಾರ್ಯಾಲಯದ ಕಟ್ಟಡ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶಾಸಕ ವಿ.ಮನಿಯಪ್ಪ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಎನ್. ಮುನಿರಾಜು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪವಿತ್ರ, ಗುತ್ತಿಗೆದಾರ ದೇವರಾಜ್, ಕೊತ್ತನೂರು ಪಂಚಾಕ್ಷರಿ ರೆಡ್ಡಿ, ಸದಸ್ಯರಾದ ನರೇಂದ್ರ, ರಾಧಾ ರವಿ, ವೆಂಕಟರೋಣಪ್ಪ, ಪಾರ್ವತಮ್ಮ ಶ್ರೀನಿವಾಸ್, ತುಮನಹಳ್ಳಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್,ಮುಅತ್ತೂರು ವೆಂಕಟೇಶ್,ಗ್ರಾಮ ಪಂಚಾಯಿತಿ ಕಾರ್ಯಾಲಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.