ಸುದ್ದಿಮೂಲ ವಾರ್ತೆ
ಕೆ.ಆರ್. ಪುರ, ಏ.12: ಮಹದೇವಪುರ ಕ್ಷೇತ್ರದ ಬೆಳತ್ತೂರಿನಲ್ಲಿ ನೂತನ ಕಾಂಗ್ರೆಸ್ ಕಚೇರಿಯನ್ನು ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ನಾಗೇಶ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕ ಎಚ್.ನಾಗೇಶ್, ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಪರಿಹರಿಸಲು ಪಕ್ಷದ ಕಚೇರಿ ಸೇತುವೆಯ ರೀತಿಯಲ್ಲಿ ಇರಲಿದೆ. ಐಟಿಬಿಟಿ ಕೇಂದ್ರವಾದ ಮಹದೇವಪುರ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿದ್ದು, ನಿವಾಸಿಗಳ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸುವ ಕಾರ್ಯ ಮಾಡಲಾಗುವುದೆಂದು ಹೇಳಿದರು.
ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಕಚೇರಿಗಳು ಹೆಚ್ಚು ಅವಶ್ಯಕವಾಗಿದ್ದು, ಸಾರ್ವಜನಿಕರ ಸರ್ವತೋಮುಖ ಅಭಿವೃದ್ಧಿಗೆ ಕಚೇರಿ ಉತ್ತಮ ವೇದಿಕೆಯಾಗಲಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಾರ್ವಜನಿಕ ಸಮಸ್ಯೆಗಳಿಗೆ ಮುಕ್ತಿ ದೊರೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳತೂರು ರಮೇಶ್, ಮಾಜಿ ಪಾಲಿಕೆ ಸದಸ್ಯ ಉದಯ್ ಕುಮಾರ್, ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ, ಬ್ಲಾಕ್ ಅಧ್ಯಕ್ಷರಾದ ಬಾಬುಗೌಡ, ವಿಟಿಬಿ ಬಾಬು, ನಾಗಪ್ಪ, ಅನೀಲ್,ಮಾಜಿ ಅಧ್ಯಕ್ಷ ಎಂಸಿಬಿ ರಾಜಣ್ಣ,ಇದ್ದರು.