ಸುದ್ದಿಮೂಲ ವಾರ್ತೆ ಬೆಂಗಳೂರು, ನ.14:
ಪದ್ಮಶ್ರೀ ಪ್ರಶಸ್ತಿಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಅನಾರೋಗ್ಯದ ಹಿನ್ನೆೆಲೆಯಲ್ಲಿ ಶುಕ್ರವಾರ ನಿಧನರಾದರು. ಇವರಿಗೆ 114 ವರ್ಷ ವಯಸ್ಸಾಾಗಿತ್ತು.
ಎರಡು ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆೆ ಲಕಾರಿಯಾಗದೇ ಶುಕ್ರವಾರ ಬೆಳಗ್ಗೆೆ ಮೃತಪಟ್ಟಿಿದ್ದಾರೆ. ಮಕ್ಕಳಿಲ್ಲದ್ದ ತಿಮ್ಮಕ್ಕ ಅವರನ್ನು ಸಾಕು ಮಗ ಉಮೇಶ್ ಬಳ್ಳೂರು ನೋಡಿಕೊಳ್ಳುತ್ತಿಿದ್ದರು.
ಮಕ್ಕಳಿಲ್ಲದ ತಿಮ್ಮಕ್ಕ ಅವರು ರಸ್ತೆೆ ಬದಿಗಳಲ್ಲಿ ಸಾಲು ಮರಗಳನ್ನು ನೆಟ್ಟು ಅವುಗಳನ್ನು ಮಕ್ಕಳಂತೆ ನೀರು ಗೊಬ್ಬರ ಹಾಕಿ ಪೋಷಿಸಿದರು. ಹೀಗಾಗಿ ಇವರಿಗೆ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಬಂದಿತು.
ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, ಕರ್ನಾಟಕದಾದ್ಯಂತ ಅಂದಾಜು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ಸಂದಿವೆ.
ತಿಮ್ಮಕ್ಕನವರು ಮಾಗಡಿ ತಾಲೂಕಿನಲ್ಲಿ 4.5 ಕಿ.ಮೀ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಪ್ರೇೇಮವನ್ನು ಮೆರೆದಿದ್ದರು. ಅಕ್ಷರಸ್ಥರಲ್ಲದಿದ್ದರೂ, ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿದ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಮರಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು, ಅವುಗಳ ಬೆಳವಣಿಗೆಗೆ ಶ್ರಮಿಸಿದ್ದರು.
ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಿಯೆಯನ್ನು ಅವರ ಕುಟುಂಬದ ಸದಸ್ಯರು ನಿರ್ಧರಿಸಿದ ಸ್ಥಳದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು. ಬೆಂಗಳೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಮಾಡಬೇಕೆಂದು ಅವರ ಕೊನೆ ಆಸೆಯಾಗಿತ್ತು. ಈ ಕುರಿತು ನನಗೆ ಪತ್ರ ಬರೆದಿದ್ದಾರೆ ಅದನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಪದ್ಮಶ್ರೀ ಪ್ರಶಸ್ತಿಿ ನೀಡಿ ಗೌರವ: ರಸ್ತೆೆ ಬದಿಯಲ್ಲಿ ಸಾಲು ಮರಗಳನ್ನು ಬೆಳೆಸಿದ ಹಿನ್ನೆೆಲೆಯಲ್ಲಿ ಈ ಮಹತ್ತರ ಕಾರ್ಯವನ್ನು ಗುರುತಿಸಿ, 2019ರಲ್ಲಿ ಭಾರತ ಸರ್ಕಾರವು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿಿಯನ್ನು ನೀಡಿ ಗೌರವಿಸಿತು. 1995ರಲ್ಲಿ ಅವರಿಗೆ ರಾಷ್ಟ್ರೀಯ ನಾಗರಿಕ ಪ್ರಶಸ್ತಿಿ ಸಹ ಲಭಿಸಿತು. ಅಮೇರಿಕಾದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಾಂಡ್ನಲ್ಲಿರುವ ತಿಮ್ಮಕ್ಕನ ಸಂಪನ್ಮೂಲಗಳು ಎಂಬ ಪರಿಸರ ಶಿಕ್ಷಣ ಸಂಸ್ಥೆೆಗೆ ಅವರ ಹೆಸರಿಡಲಾಗಿದೆ. ಇದು ಅವರ ಅಂತಾರಾಷ್ಟ್ರೀಯ ಮಟ್ಟದ ಗುರುತಿಸುವಿಕೆಗೆ ಸಾಕ್ಷಿಯಾಗಿದೆ.
ಇದಲ್ಲದೆ, ವೃಕ್ಷಮಿತ್ರ ಪ್ರಶಸ್ತಿಿ, ವೀರಚಕ್ರ ಪ್ರಶಸ್ತಿಿ, ಇಂದಿರಾ ಪ್ರಿಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಿ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿಿ, ಗಾಡ್ಫ್ರಿಿ ಫಿಲಿಪ್ಸ್ ಧೀರತೆ ಪ್ರಶಸ್ತಿಿ ಹೀಗೆ ಹಲವಾರು ಪ್ರಶಸ್ತಿಿಗಳು ಅವರ ಸಾಧನೆಗೆ ಸಂದಿವೆ. ಕರ್ನಾಟಕ ಸರ್ಕಾರವು ಅವರನ್ನು ಪರಿಸರ ರಾಯಭಾರಿ ಎಂದು ಘೋಷಿಸಿ, ಕ್ಯಾಾಬಿನೆಟ್ ದರ್ಜೆಯ ಸ್ಥಾಾನಮಾನ ನೀಡಿ ಗೌರವಿಸಿದೆ.
ಬಾಕ್ಸ್
ತುಮಕೂರಿನಲ್ಲಿ ಜನನ
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ. ಇವರಿಗೆ ಬಾಲ್ಯದಲ್ಲಿ ಶಿಕ್ಷಣ ಲಭ್ಯವಾಗದೆ ಹತ್ತಿಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಾಮದ ಚಿಕ್ಕಯ್ಯ ಎಂಬ ಕೃಷಿಕನನ್ನು ಮದುವೆಯಾದರು. ದುರಾದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು.
ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ 94ರಲ್ಲಿ ತಿಮ್ಮಕ್ಕರವರು ಬೆಳೆಸಿದ ಆಲದ ಮರಗಳು ಈಗಲೂ ಇವೆ. ತಿಮ್ಮಕ್ಕ ಅವರ ಹಳ್ಳಿಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಿಯ ಬಳಿ 4 ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಡಲಾಯಿತು.
ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಾಯಿಯಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು.
385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿಿದ್ದರು.ಅವುಗಳ ಮೌಲ್ಯ ಈಗ 15 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಮರಗಳ ನಿರ್ವಹಣೆಯನ್ನು ರಾಜ್ಯ ಸರ್ಕಾರ ವಹಿಸಿಕೊಂಡಿದೆ.
ಕೋಟ್ 01
ಸಾಲು ಮರದ ತಿಮ್ಮಕ್ಕ ಅವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆೆ ಚಿರ ಶಾಂತಿ ಸಿಗಲಿ.
-ಸಿದ್ದರಾಮಯ್ಯ, ಮುಖ್ಯಮಂತ್ರಿಿ.
ಬಾಕ್ಸ್ :
ಸಾಲುಮರದ ತಿಮ್ಮಕ್ಕ ಅವರಿಗೆ ಸಂದ ಪ್ರಶಸ್ತಿಿಗಳು:
ರಾಷ್ಟ್ರೀಯ ಪೌರ ಪ್ರಶಸ್ತಿಿ -1995
ಇಂದಿರಾ ಪ್ರಿಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಿ -1997
ವೀರಚಕ್ರ ಪ್ರಶಸ್ತಿಿ -1997
ಮಹಿಳಾ ಮತ್ತು ಶಿಶು ಕಲ್ಯಾಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆೆ, ಬೆಂಗಳೂರು – ಇವರಿಂದ ಶ್ಲಾಾಘನೆಯ ಪ್ರಮಾಣ ಪತ್ರ.
ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿಿ – 2000
ಗಾಡ್ಫ್ರಿಿ ಫಿಲಿಪ್ಸ್ ಧೀರತೆ ಪ್ರಶಸ್ತಿಿ – 2006
ಪಂಪಾಪತಿ ಪರಿಸರ ಪ್ರಶಸ್ತಿಿ
ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿಿ
ವನಮಾತೆ ಪ್ರಶಸ್ತಿಿ
ಮಾಗಡಿ ವ್ಯಕ್ತಿಿ ಪ್ರಶಸ್ತಿಿ
ಶ್ರೀಮಾತಾ ಪ್ರಶಸ್ತಿಿ
ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿಿ
ಕರ್ನಾಟಕ ಪರಿಸರ ಪ್ರಶಸ್ತಿಿ
ಮಹಿಳಾರತ್ನ ಪ್ರಶಸ್ತಿಿ
ನ್ಯಾಾಷನಲ್ ಸಿಟಿಜನ್ ಪ್ರಶಸ್ತಿಿ
ರಾಜ್ಯೋೋತ್ಸವ ಪ್ರಶಸ್ತಿಿ
ಆರ್ಟ್ ಆ್ ಲಿವಿಂಗ್ ಸಂಸ್ಥೆೆಯಿಂದ ವಿಶಾಲಾಕ್ಷಿ ಪ್ರಶಸ್ತಿಿ.
2010 ನೇ ಸಾಲಿನ ಪ್ರತಿಷ್ಠಿಿತ ’‘ನಾಡೋಜ’ ಪ್ರಶಸ್ತಿಿ ಲಭಿಸಿದೆ.
2020ರಲ್ಲಿ ಕರ್ನಾಟಕ ಕೇಂದ್ರೀೀಯ ವಿಶ್ವವಿದ್ಯಾಾಲಯದಿಂದ ಗೌರವ ಡಾಕ್ಟರೇಟ್.
ಬೆಂಗಳೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ಥಾಾಪನೆ: ಸಿಎಂ ಘೋಷಣೆ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನ

