ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.15: 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆವರಣದಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿದರು.
ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ, ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಗಣ್ಯರ ಹೋರಾಟ, ತ್ಯಾಗ, ಬಲಿದಾನಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು.
ಈ ವೇಳೇ ಅಯುಕ್ತರು ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರುಗಳಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವಪ್ಪ.ಜಿ.ಬಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.