ಸುದ್ದಿಮೂಲ ವಾರ್ತೆ ಬೆಂಗಳೂರು, ನ.19:
ಇಂದಿರಾ ಗಾಂಧಿ ದೇಶದ ಮಹಿಳಾ ಶಕ್ತಿಿಯ ಚಿಹ್ನೆೆ. ಅವರು ದೇಶ ಪ್ರೇೇಮ, ದೃಢನಿಶ್ಚಯ ಹಾಗೂ ಧೈರ್ಯದ ಪ್ರತೀಕವಾಗಿದ್ದರು ಎಂದು ಉಪ ಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಉಕ್ಕಿಿನ ಮಹಿಳೆ ಇಂದಿರಾ ಗಾಂಧಿ. ಅವರ ಜನ್ಮದಿನ ಆಚರಿಸುತ್ತಿಿದ್ದೇವೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿಿದೆ. ನಾನು ಹಾಗೂ ನನ್ನ ಸಹೋದರ ನಮ್ಮ ಕ್ವಾಾರೆಯಿಂದ ಗ್ರಾಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿಿತು ಎಂದು ಸ್ಮರಿಸಿದರು.
ಬ್ಯಾಾಂಕುಗಳ ರಾಷ್ಟ್ರೀಕರಣ ಮಾಡಿ ಬಡವರು ಹಾಗೂ ಮಧ್ಯಮ ವರ್ಗದವರು ಬ್ಯಾಾಂಕ್ ಮೆಟ್ಟಿಿಲು ಹತ್ತುವಂತೆ ಮಾಡಿದವರು ಇಂದಿರಾ ಗಾಂಧಿ. ಜನಾರ್ದನ ಪೂಜಾರಿ ಅವರು ಎಲ್ಲಾ ಜನರಿಗೆ ಸಾಲ ಸಿಗುವಂತೆ ಮಾಡಿ, ಸಾಲದ ಪೂಜಾರಿ ಎಂದೇ ಹೆಸರು ಮಾಡಿದರು. ಅದರ ಪರಿಣಾಮವಾಗಿ ಇಂದು ಬ್ಯಾಾಂಕುಗಳು ಜನರ ಮನೆ ಬಾಗಿಲಿಗೆ ತಲುಪುವಂತಾಗಿದೆ. ಪ್ರಪಂಚದ ಅನೇಕ ದೊಡ್ಡ ಬ್ಯಾಾಂಕುಗಳು ಮುಳುಗಿದರೂ ನಮ್ಮ ದೇಶದ ಬ್ಯಾಾಂಕುಗಳು ಮುಳುಗಿಲ್ಲ. ಮನಮೋಹನ್ ಸಿಂಗ್ ಅವರ ದಿಟ್ಟ ನಿರ್ಧಾರಗಳ ಪರಿಣಾಮ ನಮ್ಮ ಬ್ಯಾಾಂಕುಗಳು ಸದೃಢವಾಗಿವೆ ಎಂದರು.
ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಆರಂಭಿಸಿದ್ದು ಇಂದಿರಾ ಗಾಂಧಿ. ಅಂಗನವಾಡಿ ಆರಂಭಿಸಿ ಅಂಗನವಾಡಿ ಕಾರ್ಯಕರ್ತರ ನೇಮಕ ಮಾಡಿದರು. ವೃದ್ಧಾಾಪ್ಯ, ವಿಧವಾ ಪಿಂಚಣಿ ಕೊಟ್ಟಿಿದ್ದು ಇಂದಿರಾ ಗಾಂಧಿ. ಅವರ ಯೋಜನೆಗಳನ್ನು ಯಾವುದೇ ಸರ್ಕಾರ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ. ಕಾಂಗ್ರೆೆಸ್ ಸರ್ಕಾರದಲ್ಲಿ ಆಹಾರ ಭದ್ರತಾ ಕಾಯ್ದೆೆ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಕಲ್ಯಾಾಣ ಕರ್ನಾಟಕಕ್ಕೆೆ ವಿಶೇಷ ಸ್ಥಾಾನಮಾನ ನೀಡಲು 371ಜೆ ಜಾರಿಗೆ ತಂದಿದ್ದು ಕಾಂಗ್ರೆೆಸ್ ಸರ್ಕಾರ. ಕೃಷ್ಣ ಆವರ ಸರ್ಕಾರದಲ್ಲಿ ಕಲ್ಯಾಾಣ ಕರ್ನಾಟಕಕ್ಕೆೆ ವಿಶೇಷ ಸ್ಥಾಾನಮಾನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆೆ ಪತ್ರ ಬರೆಯಲಾಗಿತ್ತು. ಆದರೆ ಲಾಲ್ ಕೃಷ್ಣಾಾ ಆಡ್ವಾಾಣಿ ಅವರು ಇದು ಸಾಧ್ಯವಿಲ್ಲ ಎಂದು ಬರೆದರು.ಆದರೆ ಕಾಂಗ್ರೆೆಸ್ ಸರ್ಕಾರ ಸಂವಿಧಾನದ ಮೂಲಕ ಜಾರಿಗೆ ತಂದಿತು ಎಂದರು.
ಇಂದಿರಾ ಗಾಂಧಿ ಅವರ ನುಡಿಮುತ್ತುಗಳ ಪುಸ್ತಕ ಬಿಡುಗಡೆ
ಇಂದಿರಾ ಗಾಂಧಿ ಅವರ ನುಡಿಮುತ್ತಗಳನ್ನು ಸಂಗ್ರಹಿಸಿ ಸೋನಿಯಾ ಗಾಂಧಿ ಅವರು ಪುಸ್ತಕ ಬರೆದಿದ್ದಾರೆ. ಅದನ್ನು ನಾನು ಕನ್ನಡಕ್ಕೆೆ ಅನುವಾದ ಮಾಡಿದ ಕೃತಿಯನ್ನು ಇಂದು ಬಿಡುಗಡೆ ಮಾಡಿದ್ದೇನೆ. ಇದು ಎಲ್ಲರಿಗೂ ಉಚಿತವಾಗಿ ಹಂಚಬೇಕು. ಹೀಗಿದ್ದರೂ ಕಾಂಗ್ರೆೆಸ್ ಭವನ ನಿರ್ಮಾಣಕ್ಕಾಾಗಿ ಎಲ್ಲರೂ ನೂರು ರೂ. ಕೊಟ್ಟು ಪುಸ್ತಕ ಖರೀದಿಸಬೇಕು ಎಂದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆ ತ್ಯಜಿಸುವ ಸುಳಿವು ನೀಡಿದ ಡಿಕೆಶಿ
ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡು ಐದು ವರ್ಷ ಐದು ತಿಂಗಳು ಕಳೆದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾಾನದಲ್ಲಿ ನಾನು ಶಾಶ್ವತವಾಗಿ ಇರಲು ಬಯಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
2020ರಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾಾನ ವಹಿಸಿಕೊಂಡೆ. ಈಗ ಐದು ವರ್ಷ ಐದು ತಿಂಗಳು ಆಗಿದೆ. ನನ್ನ ನೇತೃತ್ವದಲ್ಲಿ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಆಭೂತಪೂರ್ವ ಜಯಗಳಿಸಿ ಅಧಿಕಾರಕ್ಕೆೆ ಬಂತು. ನನಗೆ ಹೈಕಮಾಂಡ್ ಉಪಮುಖ್ಯಮಂತ್ರಿಿ ಹುದ್ದೆ ನೀಡಿತು. ಆವೇಳೆಯೇ ನಾನು ಕೆಪಿಸಿಸಿ ಅಧ್ಯಕ್ಷ ಗಾದಿ ತ್ಯಜಿಸಲು ಮುಂದಾಗಿದ್ದೆ. ನಮ್ಮ ನಾಯಕರಾದ ರಾಹುಲ್ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯಂತೆ ಮುಂದುವರೆದೆ. ಬರುವ ಮಾರ್ಚ್ಗೆ ಅಧ್ಯಕ್ಷನಾಗಿ ಆರು ವರ್ಷ ಕಳೆಯುತ್ತದೆ ಎಂದರು.
ಈ ಹೇಳಿಕೆಯಿಂದ ಕಾರ್ಯಕ್ರಮದಲ್ಲಿ ಇದ್ದ ಕಾಂಗ್ರೆೆಸ್ ಕಾರ್ಯಕರ್ತರು ಗೊಂದಲಕ್ಕೆೆ ಒಳಗಾದರು. ಅಧ್ಯಕ್ಷಗಾದಿ ತೊರೆಯದಂತೆ ಒತ್ತಡ ತಂದರು. ಆಗ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ ಡಿ.ಕೆ.ಶಿವಕುಮಾರ್ ಅವರು, ನಾನು ಕಾಂಗ್ರೆೆಸ್ ಅಧ್ಯಕ್ಷನಾಗಿರುತ್ತೇನೋ ಅಥವಾ ತೊರೆಯುತ್ತೇನೋ ಎಂಬುದು ಮುಖ್ಯ ಅಲ್ಲ. ಹುದ್ದೆ ತೊರೆದರು ಪಕ್ಷದ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತೇನೆ. ಪಕ್ಷ ಸಂಘಟಿಸುತ್ತೇನೆ. ನನ್ನ ಅವಧಿಯಲ್ಲಿ ಮಾಡಿದ ಕೆಲಸಗಳು ಶಾಶ್ವತವಾಗಿರುತ್ತವೆ. ಪಕ್ಷದ ನೂರು ಭವನಗಳನ್ನು ನಿರ್ಮಾಣ ಮಾಡುತ್ತಿಿದ್ದೇನೆ. ಪಕ್ಷದ ಅಧ್ಯಕ್ಷನಾಗಿ ಒಂದು ಮಾದರಿ ಸ್ಥಾಾಪಿಸಿದ್ದೇನೆ. ಗಾಂಧಿ ಕುಟುಂಬ ಹಾಗೂ ಎಐಸಿಸಿ ಅಧ್ಯಕ್ಷರು ಬಯಸುವವರೆಗೂ ಕಾಂಗ್ರೆೆಸ್ ಪಕ್ಷದ ಕೆಲಸ ಮಾಡುತ್ತೇನೆ ಎಂದರು.
ಬಿಹಾರದ ಲಿತಾಂಶದಿಂದ ರಾಜ್ಯದ ಕಾಂಗ್ರೆೆಸ್ ಕಾರ್ಯಕರ್ತರು ಆತ್ಮವಿಶ್ವಾಾಸ ಕಳೆದುಕೊಳ್ಳಬೇಡಿ. ನಿಮ್ಮ ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆೆಸ್ ಬೇರುಗಳು ಗಟ್ಟಿಿಯಾಗಿವೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲೂ ಕಾಂಗ್ರೆೆಸ್ ಗೆದ್ದು ಅಧಿಕಾರ ಉಳಿಸಿಕೊಳ್ಳುತ್ತದೆ. ನಾನು ಓಡಿಹೋಗುವುದಿಲ್ಲ ಎಂದು ಕಾರ್ಯಕರ್ತರಿಗೆ ವಿಶ್ವಾಾಸ ತುಂಬಿದರು.

