ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜು 3 : ನಗರದ ಸಂತೆ ಮೈದಾನದಲ್ಲಿ ಇಂದು ಕರ್ನಾಟಕ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ ಮತ್ತು ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಸಹಯೋಗದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳ ಮಾರಾಟ ಮೇಳ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬಡವರಿಗೆ ಬಡತನದಿಂದ ಪಾರಾಗುವ ಅಪೇಕ್ಷೆ ಇದೆ. ಬಡವರ ಸಹಜ ಸಾಮರ್ಥ್ಯಗಳನ್ನು ಅನಾವರಣಗೊಳಿಸಲು, ಸಾಮಾಜಿಕ ಸಜ್ಜುಗೊಳಿಸುವಿಕೆ ಮತ್ತು ಬಲವಾದ ಸಂಸ್ಥೆಗಳು ಅವಶ್ಯಕ. ಬಡ ಕುಟುಂಬಗಳಿಗೆ ಲಾಭದಾಯಕ ಸ್ವ-ಉದ್ಯೋಗ ಮತ್ತು ಕೌಶಲ್ಯಪೂರ್ಣ ವೇತನ ಉದ್ಯೋಗಾವಕಾಶಗಳನ್ನು ಪ್ರವೇಶಿಸಲು ಅನುವು ಮಾಡಿಕೊಡುವ ಮೂಲಕ ಬಡತನವನ್ನು ಕಡಿಮೆ ಮಾಡುವುದು, ಬಡವರ ಬಲವಾದ ತಳಮಟ್ಟದ ಸಂಸ್ಥೆಗಳನ್ನು ನಿರ್ಮಿಸುವ ಮೂಲಕ ಸುಸ್ಥಿರ ಆಧಾರದ ಮೇಲೆ ಅವರ ಜೀವನೋಪಾಯದಲ್ಲಿ ಗಮನಾರ್ಹ ಸುಧಾರಣೆಯನ್ನು ಉಂಟುಮಾಡುತ್ತದೆ.
ನಗರಸಭೆ ಕಮಿಷನರ್ ಶ್ರೀಕಾಂತ್, ಅಧ್ಯಕ್ಷೆ ಸುಮಿತ್ರಾ ರಮೇಶ, ವಾರ್ಡ್ ಕೌನ್ಸಿಲರ್ ಸುರೇಶ್, ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಲತಾ, ಎನ್ ಆರ್ ಎಲ್ ಎಂ ಸಿಬ್ಬಂದಿ ಬಾಲರಾಜ, ನರಸಿಂಹ, ನಳಿನಿ, ಭಾಗ್ಯಲಕ್ಷ್ಮಿ, ಅಮರಾವತಿ ಮತ್ತು ತಾಲ್ಲೂಕಿನ ಎಲ್ಲಾ ಎಂಬಿಕೆ ಮತ್ತು ಎಲ್ ಸಿ ಆರ್ ಪಿ ಗಳು, ಕೃಷಿ ಸಖಿಗಳು, ಪಶು ಸಖಿಗಳು, ವನ ಸಖಿಗಳು, ಕೃಷಿ ಉದ್ಯೋಗ ಸಖಿಯವರು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.