ಸುದ್ದಿಮೂಲ ವಾರ್ತೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು.
ನ್ಯೂನ್ಯತೆಗಳು ಕಂಡುಬಂದ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಅಧಿಕಾರಿಗಳು ಸ್ಥಳದಲ್ಲೇ ಮುಚ್ಚಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 12 ಉದ್ದಿಮೆಗಳನ್ನು ಮುಚ್ಚಿಸಿದರು.