ಸುದ್ದಿಮೂಲ ವಾರ್ತೆ
ತುಮಕೂರು, ಸೆ.27 : ಹೇಮಾವತಿ ನಾಲಾ, ಎತ್ತಿನಹೊಳೆ, ಕೆಐಎಡಿಬಿ, ರಾಷ್ಟ್ರೀಯ ಹೆದ್ದಾರಿ-206,ತುಮಕೂರು-ದಾವಣಗೆರೆ ರೈಲ್ವೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳಿಗೆ ಸಂಬAಧಿಸಿದAತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಾಮಗಾರಿಗಳಿಗೆ ವೇಗ ನೀಡಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹೇಮಾವತಿ ಹಾಗೂಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂ ಮಾಲೀಕರಿಗೆ ಅವಾರ್ಡ್ ಆದ ಪರಿಹಾರ ಹಣವನ್ನು ಬಾಕಿ ಉಳಿಸಿಕೊಳ್ಳದೆ ತ್ವರಿತವಾಗಿ ನೀಡಬೇಕು ಎಂದರಲ್ಲದೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಯೋಜನೆಗಳು ನಿಗಧಿತ ಅವಧಿಯೊಳಗೆ ಪೂರ್ಣಗೊಳ್ಳದಂತಾಗಿದೆ. ಯೋಜನೆಗಳು ಜಾರಿಯಾಗಿ ಹಲವಾರು ವರ್ಷ ಕಳೆದರೂ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲು ಕಾರಣವೇನೆಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಹೇಮಾವತಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೈಗೊಂಡಿರುವ ಗುಬ್ಬಿ ತಾಲ್ಲೂಕಿನ ಜೀಗನಹಳ್ಳಿ,ಚಾಕೇನಹಳ್ಳಿ, ಮಡೇನಹಳ್ಳಿ, ಇಂಗಳದ ಕಾವಲ್ ಗ್ರಾಮಗಳ ಭೂಮಾಲೀಕರಿಗೆ ಪರಿಹಾರ ನೀಡಲು ಅನುಮೋದನೆ ನೀಡಿದ್ದರೂ ಸಹ ಅವಾರ್ಡ್ ನೋಟೀಸ್ ಇದುವರೆಗೂ ಜಾರಿಯಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಅವರು ಕೂಡಲೇ ಅನುಮೋದನೆಯಾಗಿರುವ ಅವಾರ್ಡ್ಮೊತ್ತವನ್ನು ಮಾಲೀಕರಿಗೆ ನೀಡಬೇಕೆಂದು ನಿರ್ದೇಶನ ನಿಡಿದರು.
ನಂತರ ಪ್ರತಿಕ್ರಿಯಿಸಿದ ಗೃಹ ಸಚಿವರು, 2015ರಲ್ಲೇ ಬಿಕ್ಕೆಗುಡ್ಡ ಕುಡಿಯುವ ನೀರಿನ ಯೋಜನೆಗೆ ಅನುಮೋದನೆಯಾಗಿದ್ದರೂ,ಈವರೆಗೂ ಯೋಜನೆ ಪೂರ್ಣಗೊಂಡಿಲ್ಲ. ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ರೈತರ ಮನವೊಲಿಸಿ ಆದಷ್ಟು ಶೀಘ್ರ ಕೈಗೊಂಡು ನವೆಂಬರ್ ಮಾಹೆಯೊಳಗೆ ಯೋಜನೆಯನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.