ಸುದ್ದಿಮೂಲ ವಾರ್ತೆ ಬೆಂಗಳೂರು, ಅ.04:
ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊೊಂದು ಹುಲಿ ಹತ್ಯೆೆ ಪ್ರಕರಣಕ್ಕೆೆ ಸಂಬಂಧಿಸಿದಂತೆ ಶಂಕಿತ ಆರೋಪಿ ವಶಕ್ಕೆೆ ಪಡೆಯಲಾಗಿದೆ.
ಹುಲಿಯನ್ನು ಮೂರು ಭಾಗವಾಗಿ ಕತ್ತರಿಸಿ ಹತ್ಯೆೆ ಮಾಡಲಾಗಿದ್ದು, ಶಂಕಿತ ಓರ್ವನನ್ನು ಅರಣ್ಯಾಾಧಿಕಾರಿಗಳು ವಶಕ್ಕೆೆ ಪಡೆದಿದ್ದಾರೆ. ವಿಚಾರಣೆ ನಡೆದಿದ್ದು, ಶೀಘ್ರವೇ ಹುಲಿ ಹತ್ಯೆೆಗೆ ನೈಜ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಾಧಿಕಾರಿಗಳೊಂದಿಗೆ ಇಂದು ಅರಣ್ಯ ಸಚಿವ ಈರ್ಶ್ವ ಖಂಡ್ರೆೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದರು. ಈ ವೇಳೆ ಮಲೆ ಮಹದೇಶ್ವರ ಅರಣ್ಯ ಭಾಗದಲ್ಲಿ ಗಸ್ತು ಹೆಚ್ಚಿಿಸಲು ಸೂಚಿಸಿ, ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದರೆ ಕ್ರಮಕ್ಕೆೆ ಶಿಾರಸ್ಸು ಮಾಡುವಂತೆ ಹಾಗೂ 5 ಹುಲಿ ಹಾಗೂ ಮೊನ್ನೆೆ ನಡೆದಿರುವ ಹುಲಿ ಹತ್ಯೆೆಯ ಆರೋಪಿಗಳಿಗೆ ಶೀಘ್ರ ಶಿಕ್ಷೆ ಕೊಡಿಸಲು ಕ್ರಮಕೈಗೊಂಡು ಸ್ಪಷ್ಟ ಸಂದೇಶ ರವಾನಿಸಲು ಸೂಚಿಸಿದರು.
ಸಭೆ ನಡೆಸಿ ವರದಿ ನೀಡಲು ಸೂಚನೆ:
ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ ಪ್ರಸ್ತಾಾವನೆ ಸಂಬಂಧ ಸ್ಥಳೀಯರಯ ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ಸಚಿವ ಖಂಡ್ರೆೆ ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರಣ್ಯ ಪ್ರದೇಶದೊಳಗೆ ಇರುವ ಹಾಡಿಗಳಲ್ಲಿರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆೆ ಸಂಪೂರ್ಣ ದತ್ತಾಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆೆ ಹಾಡಿಯಲ್ಲಿರುವ ದನಕರುಗಳು ವನ್ಯಜೀವಿಯಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.
ಜಾಗೃತಿ ಮೂಡಿಸಿ:
ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮದ ಅಂಚಿನ ಗ್ರಾಾಮಗಳಲ್ಲಿ ಮತ್ತು ಅರಣ್ಯದ ಹಾಡಿಯ ಬಳಿ ವನ್ಯಜೀವಿಗಳಿಗೆ ವಿಷ ಹಾಕುತ್ತಿಿರುವ ಘಟನೆಗಳು ಮತ್ತು ಕಳ್ಳಬೇಟೆ ಪ್ರಕರಣಗಳು ವರದಿಯಾಗುತ್ತಿಿದ್ದು, ಅರಣ್ಯವಾಸಿಗಳು ಮತ್ತು ಕಾಡಿನಂಚಿನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಹಾಗೂ ವನ್ಯಜೀವಿಗಳಿಂದ ಬೆಳೆ ಹಾನಿ ಆಗಿದ್ದಲ್ಲಿ ಪರಿಶೀಲಿಸಿ, ಪರಿಹಾರ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೂಲಸೌಕರ್ಯ ಒದಗಿಸಲು ಸೂಚನೆ:
ಹೊರಗುತ್ತಿಿಗೆಯ ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಆಗುತ್ತಿಿದೆಯೇ ಇಲ್ಲವೇ, ಇವರು ಸರಿಯಾಗಿ ಗಸ್ತು ನಡೆಸುತ್ತಿಿದ್ದಾರೋ ಇಲ್ಲವೋ, ಎಂಸ್ಟ್ರೈಪ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಿದೆಯೇ ಎಂಬುದನ್ನು ಖಾತ್ರಿಿಪಡಿಸಿಕೊಳ್ಳಲು ಸಚಿವರು ಸೂಚಿಸಿದರು.
ಸಿಬ್ಬಂದಿ ಗಸ್ತು ತಿರುಗುತ್ತಿಿರುವ ಕುರಿತಂತೆ ಜಿಪಿಎಸ್ ಸಹಿತ ೆಟೋ ತೆಗೆಯಲು ಸೂಚಿಸಿ, ಅದನ್ನು ಹಿರಿಯ ಅಧಿಕಾರಿಗಳು ಆಗಾಗ್ಗೆೆ ಪರಾಮರ್ಶಿಸಬೇಕು, ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದೂ ಈಶ್ವರ ಖಂಡ್ರೆೆ ತಿಳಿಸಿದರು.
ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿರುವ ಸಿಬ್ಬಂದಿಗೆ ಬೂಟು, ಜಾಕೆಟ್, ಕುಡಿಯುವ ನೀರು, ಆಹಾರ ಧಾನ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲೂ ಸಚಿವರು ಸೂಚನೆ ನೀಡಿದರು.
ಚನ್ನಪಟ್ಟಣ ಆನೆ ಸಾವಿನ ಬಗ್ಗೆೆ ಪರಾಮರ್ಶೆ:
ಚನ್ನಪಟ್ಟಣದ ಗೊಲ್ಲರದೊಡ್ಡಿಿಯ ಬಳಿ ಇಂದು ತೆಂಗಿನಮರದ ಹೊಂಬಾಳೆ ತಿನ್ನಲು ಯತ್ನಿಿಸಿದ ಆನೆಯೊಂದು ಪಕ್ಕದಲ್ಲಿದ್ದ ವಿದ್ಯುತ್ ಕಂಬದ ತಂತಿ ಸ್ಪರ್ಶದಿಂದ ಮೃತಪಟ್ಟಿಿರುವ ಕುರಿತಂತೆಯೂ ಸಭೆಯಲ್ಲಿ ಪರಾಮರ್ಶಿಸಲಾಯಿತು.
ಪ್ರತಿ ವರ್ಷ ಸರಾಸರಿ ವಿದ್ಯುತ್ ಸ್ಪರ್ಶದಿಂದ 14 ಆನೆಗಳು ಮೃತಪಡುತ್ತಿಿವೆ. ಆದರೆ ಈ ವರ್ಷ 7 ಆನೆಗಳು ಮಾತ್ರ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿವೆ. ರೈತರಿಗೆ, ತೋಟದ ಮಾಲೀಕರಿಗೆ ಬೇಲಿಯ ತಂತಿಗೆ ಅಕ್ರಮವಾಗಿ ವಿದ್ಯುತ್ ಹರಿಸದಂತೆ ಮನವಿ ಮಾಡಲಾಗಿದೆ. ತಪಾಸಣೆ ನಡೆಲಾಗುತ್ತಿಿದೆ ಎಂದೂ ಸಭೆಗೆ ಅಧಿಕಾರಿಗಳು ತಿಳಿಸಿದರು.
ಆನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗದಂತೆ ಹಾಗೂ ಅರಣ್ಯ ಪ್ರದೇಶದಲ್ಲಿ ಅಥವಾ ಅರಣ್ಯದಂಚಿನಲ್ಲಿ ತೂಗಾಡುತ್ತಿಿರುವ ಅಥವಾ ಜೋತು ಬಿದ್ದಿರುವ ವಿದ್ಯುತ್ ತಂತಿಯ ದುರಸ್ತಿಿ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪತ್ರ ಬರೆದು ಕ್ರಮ ವಹಿಸಲು ಸೂಚಿಸುವಂತೆ ತಿಳಿಸಿದರು.
ಸಭೆಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ ಮತ್ತಿಿತರರು ಪಾಲ್ಗೊೊಂಡಿದ್ದರು.

