ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.16:
ಬೀದರ್ ನಗರಕ್ಕೆೆ ಉಡಾನ್ ಯೋಜನೆಯಡಿ ಕಲ್ಪಿಿಸಲಾಗಿದ್ದ ನಾಗರಿಕ ವಿಮಾನಯಾನ ಸೇವೆ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಕಾರಣ, ಜನರ ಅನುಕೂಲಕ್ಕಾಾಗಿ ಕಲ್ಯಾಾಣ ಕರ್ನಾಟಕ ಅಭಿವೃದ್ಧಿಿ ಮಂಡಳಿಯಿಂದ 15 ಕೋಟಿ ರೂ. ನೀಡಿ ಮರು ಆರಂಭ ಮಾಡಲಾಗಿದೆ, ಆದರೆ ಬೇರೆ ಕಡೆಗಳಲ್ಲಿ ವಿಮಾನ ನಿಲ್ದಾಾಣ ನಿರ್ಮಾಣಕ್ಕೆೆ 300 ಕೋಟಿ 1000 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆೆ ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ತಿಿನಲ್ಲಿ ಮಂಗಳವಾರ ಪ್ರಶ್ನೋೋತ್ತರ ಕಲಾಪದ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, 1960ರ ದಶಕದಿಂದಲೂ ವಿಮಾನ ನಿಲ್ದಾಾಣವಿದ್ದು, ಕೇವಲ 20 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್ ಸಿದ್ಧಪಡಿಸಿ ವಿಮಾನ ಯಾನ ನಡೆಯುತ್ತಿಿತ್ತು, ಆದರೆ ಉಡಾನ್ ಯೋಜನೆ 3 ವರ್ಷ ಆದ ಬಳಿಕ ಸ್ಥಗಿತಗೊಂಡಿತ್ತು ಎಂದರು.
ಬೀದರ್ ನಾಗರಿಕ ವಿಮಾನ ಯಾನ ಸೇವೆಗಾಗಿ ಟರ್ಮಿನಲ್ ಮತ್ತು ಅನುದಾನ ಸೇರಿ ಒಟ್ಟು ವೆಚ್ಚ ಮಾಡಿರುವುದು 35 ಕೋಟಿ ರೂ. ಮಾತ್ರ ಎಂದು ಈಶ್ವರ ಖಂಡ್ರೆೆ ಸದನಕ್ಕೆೆ ಸ್ಪಷ್ಟನೆ ನೀಡಿದರು.

