ಸಿರವಾರ:ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿ ನುಡಿದರು.
ಅವರು ಗುರುವಾರ ತಾಲೂಕಿನ ನವಲಕಲ್ ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳ ೧೨ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಹಾಗೂ ಧರ್ಮ ಸಭೆಯ ದಿವ್ಯಸಾನಿಧ್ಯವಹಿಸಿ ಮಾತನಾಡಿ ಪಂಚಪೀಠಗಳು ಈ ನಾಡಿನ ಜನರಿಗೆ ಧರ್ಮದ ಸಂದೇಶದ ಜೊತೆಗೆ ಆಧ್ಯಾತ್ಮಿಕ ಜ್ಞಾನ, ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿವೆ ಎಂದರು. ಈ ಸಂದರ್ಭದಲ್ಲಿ ರಾಯಚೂರು, ಗಬ್ಬೂರು, ನೀಲಗಲ್, ನವಲಕಲ್ ಮಠದ ಪೂಜ್ಯರು, ಅನೇಕ ಭಕ್ತರು ಭಾಗವಹಿಸಿದ್ದರು.