- ಸಿರವಾರ: ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ರಂಭಾಪುರಿ ಪೀಠದ ಜಗದ್ಗುರು ಗಳಾದ ಡಾ.ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
- ಅವರು ಗುರುವಾರ ತಾಲೂಕಿನ ನವಲಕಲ್ ಬೃಹನ್ಮಠದ ಪೀಠಾಧ್ಯಕ್ಷರಾದ ಅಭಿನವಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳ ೧೨ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಹಾಗೂ ಧರ್ಮಸಭೆಯ ದಿವ್ಯಸಾನಿಧ್ಯವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಯಚೂರು, ಗಬ್ಬೂರು, ನೀಲಗಲ್, ನವಲಕಲ್ ಮಠದ ಪೂಜ್ಯರು, ಅನೇಕ ಭಕ್ತರು ಭಾಗವಹಿಸಿದ್ದರು.