ಬಿಜೆಪಿಯಿಂದ ಟಿಕೆಟ್ ಸಿಗದೆ ಕಾಂಗ್ರೆಸ್ ಸೇರಿ ಸೋಲು ಅನುಭವಿಸಿದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೂ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಚುನಾವಣಾ ಫಲಿತಾಂಶದ ಬಳಿಕ ಹುಬ್ಬಳ್ಳಿಯಲ್ಲೇ ಇದ್ದ ಜಗದೀಶ್ ಶೆಟ್ಟರ್ ಅವರನ್ನು ಭಾನುವಾರ ಬೆಂಗಳೂರಿಗೆ ಬರುವಂತೆ ಸೂಚಿಸಲಾಗಿತ್ತು. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶೆಟ್ಟರ್ ಅವರೂ ಭಾಗಿಯಾಗಿದ್ದರು ಎನ್ನಲಾಗಿದೆ.
ಇನ್ನು ಶೆಟ್ಟರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಮುಂದಿನ ಆರು ತಿಂಗಳ ಒಳಗೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ.
ಅಲ್ಲದೆ, 2014ರಲ್ಲಿ ಎದುರಾಗುವ ಲೋಕಸಭಾ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ವಿರುದ್ಧ ಶೆಟ್ಟರ್ ಅವರನ್ನು ಕಣಕ್ಕಿಳಿಸಲು ಸಹ ಆಲೋಚಿಸಲಾಗಿದೆ. ಶೆಟ್ಟರ್ ಅವರನ್ನು ಈಗ ಕೈಬಿಡದೆ ಸಚಿವ ಸ್ಥಾನ ನೀಡಿದರೆ ಅದು ಮುಂದಿನ ಲೋಕಸಭಾ ಚುನಾವಣೆಗೂ ಲಿಂಗಾಯತ ಸಮುದಾಯದ ಬೆಂಬಲ ಪಡೆಯಲು ಅನುಕೂಲ ಎಂದು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.