ಅ.10:ವಿಜಯ ನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವ್ಯಾಸನಕೆರೆ ರೈಲ್ವೆ ನಿಲ್ದಾಣ ಸಮೀಪ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಏಳು ಮಂದಿ ಕುಟುಂಬ ಕ್ಕೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಘಟನೆ ವಿವರಿಸಿ ಮೃತರು ಬಡ ಕುಟುಂಬದವರಾಗಿದ್ದು ನೆರವು ನೀಡುವ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟರು. ಮುಖ್ಯಮಂತ್ರಿ ಅವರು ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಒಪ್ಪಿಗೆ ಸೂಚಿಸಿದರು.